Groupism exists in government: ಅತ್ತ ಡಿಕೆ ಶಿವಕುಮಾರ್ ದೆಹಲಿಗೆ ಇತ್ತ ಎಂಬಿ ಪಾಟೀಲ್, ಜಮೀರ್ ಅಹ್ಮದ್ ಮುಖ್ಯಮಂತ್ರಿಗಳ ನಿವಾಸಕ್ಕೆ!

ಅರುಣ್​ ಕುಮಾರ್​ ಬೆಳ್ಳಿ

Updated on: May 24, 2023 | 6:53 PM

ಈ ಗುಂಪುಗಾರಿಕೆ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದರೆ ಆಶ್ಚರ್ಯಪಡಬೇಕಿಲ್ಲ!

ಬೆಂಗಳೂರು: ಇಂದು ಕರ್ನಾಟಕ ವಿಧಾನ ಸಭೆಯ ವಿಶೇಷ ಅಧಿವೇಶನ ಕೊನೆಗೊಳ್ಳುತ್ತಿದ್ದಂತೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮತ್ತು ಇತರ ಕೆಲ ಸಚಿವರು ದೆಹಲಿಗೆ ತೆರಳುತ್ತಿದ್ದಂತೆಯೇ ಇತ್ತ ಬೆಂಗಳೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ನಿವಾಸದಲ್ಲಿ ಬಿರುಸಿನ ಚಟುವಟಿಕೆಗಳು ಶುರುವಾದವು. ಮೊದಲಿಗೆ, ಡಿಕೆ ಸಹೋದರರ ಜೊತೆ ವೈರತ್ವ ಕಟ್ಟಿಕೊಂಡಿರುವ ಎಂಬಿ ಪಾಟೀಲ್ (MB Patil) ಸಿದ್ದರಾಮಯ್ಯನವರ ನಿವಾಸಕ್ಕೆ ದೌಡಾಯಿಸಿದರು. ಸ್ವಲ್ಪ ಹೊತ್ತಿನ ಬಳಿಕ ಡಿಕೆ ಶಿವಕುಮಾರ್ ಅವರಿಂದ ಮೊದಲಿಂದಲೂ ಅಂತರ ಕಾಯ್ದುಕೊಂಡಿರುವ ಸಚಿವ ಬಿಜೆಡ್ ಜಮೀರ್ ಅಹ್ಮದ್ (BZ Zameer Ahmed) ಕೂಡ ಮುಖ್ಯಮಂತ್ರಿಗಳ ನಿವಾಸಕ್ಕೆ ಆಗಮಿಸಿದರು. ಈ ಗುಂಪುಗಾರಿಕೆ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದರೆ ಆಶ್ಚರ್ಯಪಡಬೇಕಿಲ್ಲ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 24, 2023 06:53 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.