ಮಂಗಳೂರು: ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ಅರೋಪ; ಮಹಿಳೆಯರಿಂದ ವ್ಯಕ್ತಿಗೆ ಬಿತ್ತು ಗೂಸಾ!

ಕಿರಣ್ ಹನುಮಂತ್​ ಮಾದಾರ್

Updated on: Jul 13, 2024 | 10:09 PM

ಬೆಂಗಳೂರಿನಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನಿಗೆ ಮಹಿಳೆಯರು ಸೇರಕೊಂಡು ಬಸ್​ನಲ್ಲೇ ಗೂಸಾ ಕೊಟ್ಟ ಘಟನೆ ನಡೆದಿದೆ. ಪಕ್ಕದಲ್ಲಿ ಕೂರಲು ಮೈಕೈ ಮುಟ್ಟಿದ್ದಾನೆ. ಈ ಹಿನ್ನಲೆ ರೊಚ್ಚಿಗೆದ್ದ ಬಾಲಕಿಯ ತಾಯಿ ಹಾಗೂ ಸಾರ್ವಜನಿಕರು ಸರಿಯಾಗಿ ಗೂಸಾ ಕೊಟ್ಟಿದ್ದಾರೆ.

ದಕ್ಷಿಣ ಕನ್ನಡ, ಜು.13: ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನಿಗೆ ಮಹಿಳೆಯರು ಸೇರಕೊಂಡು ಬಸ್​ನಲ್ಲೇ ಗೂಸಾ ಕೊಟ್ಟ ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ನಡೆದಿದೆ. ಕೆಎಸ್​ಆರ್​ಟಿಸಿ ಬಸ್​ನಲ್ಲಿ ಆರೋಪಿ ಪ್ರಯಾಣ ಮಾಡುತ್ತಿದ್ದ. ಈ ವೇಳೆ ಅಪ್ರಾಪ್ತ ಬಾಲಕಿಯನ್ನು ಪಕ್ಕದಲ್ಲಿ ಕೂರಲು ಹೇಳಿದ ಕಾಮುಕ. ಮೈ ಕೈಗೆಲ್ಲ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನಂತೆ. ಈ ಹಿನ್ನಲೆ ರೊಚ್ಚಿಗೆದ್ದ ಬಾಲಕಿಯ ತಾಯಿ ಹಾಗೂ ಸಾರ್ವಜನಿಕರು ಸರಿಯಾಗಿ ಗೂಸಾ ಕೊಟ್ಟಿದ್ದಾರೆ. ಆತನಿಗೆ ಗೂಸಾ ಕೊಡುವ ದೃಶ್ಯ ಮೊಬೈಲ್​ವೊಂದರಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.