ಕೊಳವೆಬಾವಿ ಯೋಜನೆಯಲ್ಲಿ ಭಾರೀ ಅಕ್ರಮ, ಬಿಬಿಎಂಪಿ ಮುಖ್ಯ ಇಂಜಿನೀಯರ್ ಕಚೇರಿ ಮೇಲೆ ಈಡಿ ದಾಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Jan 07, 2025 | 5:51 PM

ಬಿಬಿಎಂಪಿಯಲ್ಲಿ ಈಗ ಅಧಿಕಾರಿಗಳದ್ದೇ ಕಾರುಬಾರು. ಪಾಲಿಕೆಯ ಚುನಾವಣೆ ಯಾವಾಗ ನಡೆಸಬೇಕೆಂದು ಕೋರ್ಟ್ ತೀರ್ಮಾನಿಸಲಿದೆ. ಈ ವರ್ಷ ಮೇ ತಿಂಗಳಲ್ಲಿ ಚುನಾವಣೆ ನಡೆಸಲಾಗುವುದೆಂದು ಹೇಳಲಾಗುತ್ತಿದೆಯಾರೂ ಅದಿನ್ನೂ ದೃಢಪಟ್ಟಿಲ್ಲ. ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಆಧಿಕಾರಿಗಳು ಆಡಿದ್ದೇ ಆಟ. ನಗರದ ರಸ್ತೆಗಳಂತೂ ಗಬ್ಬೆದ್ದು ಹೋಗಿವೆ, ಬೆಂಗಳೂರನ್ನು ಅನಾಥ ಪ್ರಜ್ಞೆ ಕಾಡುತ್ತಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಭಷ್ಟಾಚಾರದ ಕೊಂಪೆಯೆಂದು ಕರೆಯೋದು ಕನ್ನಡಿಗರಿಗೆ ಗೊತ್ತಿರದ ಸಂಗತಿಯೇನಲ್ಲ. ಅಚ್ಚರಿ ಹುಟ್ಟಿಸುವ ಬೆಳವಣಿಗೆಯೊಂದರಲ್ಲಿ ಇಂದು ಈಡಿ ಅಧಿಕಾರಿಗಳು ಪಾಲಿಕೆಯ ಮುಖ್ಯ ಇಂಜಿನೀಯರ್ ಕಚೇರಿ ಮೇಲೆ ದಾಳಿ ನಡೆಸಿದರು. ಕೊಳವೆ ಬಾವಿ ಕೊರೆಸುವ ಯೋಜನೆಯಲ್ಲಿ ₹ 960 ಕೋಟಿ ಅಕ್ರಮ ನಡೆದಿದೆ ಎಂಬ ಅರೋಪದ ಹಿನ್ನೆಲೆಯಲ್ಲಿ ಈಡಿ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪಾಲಿಕೆಯ ಮುಖ್ಯ ಆಯುಕ್ತರ ಕೋಣೆಯಲ್ಲಿ ಪರಿಶೀಲನೆ ನಡೆಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಈಡಿ ದಾಳಿ ಮಾಡಿದ್ದು ಮುಡಾ ಕಚೇರಿ ಮೇಲೆ, ಸಿಎಂ ಮನೆ ಮೇಲಲ್ಲ: ಸತೀಶ್ ಜಾರಕಿಹೊಳಿ

Published on: Jan 07, 2025 05:48 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.