ಕೊಡಗಿನಲ್ಲಿ‌ ಪ್ರವಾಸಿಗರ ಮೇಲೆ‌ ಹಲ್ಲೆ; ಪುಂಡರ ಅಟ್ಟಹಾಸದ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆ

ಕಿರಣ್ ಹನುಮಂತ್​ ಮಾದಾರ್

Updated on: Jun 23, 2024 | 5:00 PM

ಕೊಡಗಿನ ಪ್ರಕೃತಿ ಸೌಂದರ್ಯ ಸವಿಯಲು ಹೋಗಿದ್ದ ಪ್ರವಾಸಿಗರ ಮೇಲೆ‌ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕೋಟೆಬೆಟ್ಟ ರಸ್ತೆಯಲ್ಲಿ ನಡೆದಿದೆ. ಪುತ್ತೂರಿನಿಂದ ಆಗಮಿಸಿದ್ದ ಕುಟುಂಬವೊಂದಕ್ಕೆ ಬೈಕ್‌ನಲ್ಲಿ ಆಗಮಿಸಿದ್ದ ಇಬ್ಬರು ಮನಸ್ಸಿಗೆ ಬಂದಂತೆ ಥಳಿಸಿದ್ದಾರೆ.

ಕೊಡಗು, ಜೂ.23: ಇನ್ನೇನು ಮಳೆಗಾಲ ಕೂಡ ಆರಂಭವಾಯಿತು, ಪ್ರಕೃತಿ ಸೊಬಗನ್ನ ಕಣ್ತುಂಬಿಕೊಳ್ಳಲು ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಅದರಂತೆ ಕೊಡಗಿನ ಪ್ರಕೃತಿ ಸೌಂದರ್ಯ ಸವಿಯಲು ಹೋಗಿದ್ದ ಪ್ರವಾಸಿಗರ ಮೇಲೆ‌ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕೋಟೆಬೆಟ್ಟ ರಸ್ತೆಯಲ್ಲಿ ನಡೆದಿದೆ. ಪುತ್ತೂರಿನಿಂದ ಆಗಮಿಸಿದ್ದ ಕುಟುಂಬವೊಂದಕ್ಕೆ ಬೈಕ್‌ನಲ್ಲಿ ಆಗಮಿಸಿದ್ದ ಇಬ್ಬರು ಮನಸ್ಸಿಗೆ ಬಂದಂತೆ ಥಳಿಸಿದ್ದಾರೆ. ಕೃತ್ಯದ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ. ಇನ್ನು ಹಲ್ಲೆ ಬಳಿಕ ಪುಂಡರು ಬೈಕ್ ಬಿಟ್ಟು ಪರಾರಿಯಾಗಿದ್ದು, ಪ್ರವಾಸಿಗರು ಮಾದಾಪುರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 23, 2024 04:58 PM
Follow Us
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.