ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು: ಬೆಂಕಿ ಇಟ್ಟಿದ್ದು ದುಷ್ಕರ್ಮಿಗಳು!

Updated on: Apr 22, 2026 | 2:07 PM

ನೆಲಮಂಗಲದ ಫ್ಲೈವುಡ್ ಗೋದಾಮಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಈ ಘಟನೆಯಿಂದ ಗೋದಾಮಿನಲ್ಲಿದ್ದ ಅಪಾರ ವಸ್ತುಗಳು ಬೆಂಕಿಗೆ ಆಹುತಿಯಾಗಿ ಭಾರಿ ನಷ್ಟ ಉಂಟಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನೆಲಮಂಗಲ, ಏಪ್ರಿಲ್​​ 22: ಫ್ಲೈವುಡ್ ಗೋದಾಮೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಈ ಅವಘಡದಿಂದ ಗೋದಾಮಿನಲ್ಲಿದ್ದ ಫ್ಲೈವುಡ್ ಮತ್ತು ಇತರ ಸಾಮಗ್ರಿ ಬೆಂಕಿಗೆ ಆಹುತಿಯಾಗಿ ಭಾರಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ, ಸ್ಥಳಕ್ಕೆ ಬಂದ ಜನರು ಮತ್ತು ವೀಕ್ಷಕರಿಗೆ ಸುರಕ್ಷತೆ ದೃಷ್ಟಿಯಿಂದ ದೂರ ಉಳಿಯುವಂತೆ ಎಚ್ಚರಿಕೆ ನೀಡಲಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಬೆಂಕಿ ಅವಘಡವು ದುಷ್ಕರ್ಮಿಗಳ ಕೃತ್ಯ ಎಂದು ಶಂಕಿಸಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ವರದಿ: ಮಂಜುನಾಥ್​​, ಟಿವಿ9 ನೆಲಮಂಗಲ

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 22, 2026 02:06 PM
Follow Us