ಶಿವಮೊಗ್ಗದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು

ಶಿವಮೊಗ್ಗದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು

Basavaraj Yaraganavi
| Updated By: ವಿವೇಕ ಬಿರಾದಾರ

Updated on:Aug 21, 2023 | 10:39 AM

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದಲ್ಲಿ 18 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದ್ದ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಹೊಳೆಹೊನ್ನೂರು ಗ್ರಾಮಸ್ಥರು ಖಂಡನೆ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ: ಕಿಡಿಗೇಡಿಗಳು ಮಹಾತ್ಮ ಗಾಂಧೀಜಿ (Mahatma Gandhiji) ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ಜಿಲ್ಲೆ ‌ಭದ್ರಾವತಿ (Bhadravati) ತಾಲೂಕಿನ ಹೊಳೆಹೊನ್ನೂರು ಗ್ರಾಮದಲ್ಲಿ ನಡೆದಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಹೊಳೆಹೊನ್ನೂರು ಗ್ರಾಮಸ್ಥರು ಖಂಡನೆ ವ್ಯಕ್ತಪಡಿಸಿದ್ದು, ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಗ್ರಾಮಸ್ಥರ ಆಗ್ರಹಿಸಿದ್ದಾರೆ. ಹೊಳೆಹೊನ್ನೂರಿನ ಪ್ರಮುಖ ವೃತ್ತದಲ್ಲಿ ಗಾಂಧೀಜಿ ಪ್ರತಿಮೆಯನ್ನು 18 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿತ್ತು. ತಡರಾತ್ರಿ ಕಿಡಿಗೇಡಿಗಳು ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಇನ್ನು ಘಟನೆ ಹೊಳೆಹೊನ್ನೂರು ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಆರೋಪಿಗಳನ್ನು ಶೀಘ್ರದಲ್ಲೇ  ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿದ್ದರು. ಆರೋಪಿಗಳ ಬಂಧನ ಆಗುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಪಟ್ಟು ಹಿಡಿದ್ದರು.

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು ಪ್ರತಿಭಟನೆ ಕೈ ಬಿಡುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದರು. ಅಲ್ಲದೇ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದರು. ಎಸ್​ಪಿ ಅವರ ಭರವಸೆ ಮೇರೆಗೆ ಗ್ರಾಮಸ್ಥರು ಪ್ರತಿಭಟನೆ ಕೈ ಬಿಟ್ಟರು.

Published on: Aug 21, 2023 08:28 AM