ಕೈತಪ್ಪಿದ ಸಚಿವ ಸ್ಥಾನ: ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು

Updated on: Aug 03, 2026 | 6:29 PM

Karnataka Cabinet Expansion: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ ತಾರಕಕ್ಕೇರಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡರು ಕಣ್ಣೀರಿಟ್ಟಿದ್ದಾರೆ. ಹಲವು ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜೀನಾಮೆ ಬೆದರಿಕೆಗೂ ಜಗ್ಗುವುದಿಲ್ಲ ಎಂದು ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದೆ.

ಬೆಂಗಳೂರು, ಆಗಸ್ಟ್​​ 03: ಸಚಿವ ಸಂಪುಟ ವಿಸ್ತರಣೆ ಬೆನ್ನಲೇ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವಸ್ಥಾನ ಸಿಗದಿದ್ದಕ್ಕೆ ಅಸಮಾಧಾನಿತ ಶಾಸಕರು ಟಿ.ಬಿ.ಜಯಚಂದ್ರ ಮನೆಯಲ್ಲಿ ಸಭೆ ನಡೆಸಿದ್ದಾರೆ. ಅಪ್ಪಾಜಿ ನಾಡಗೌಡ ಮತ್ತು ಎಂ.ವೈ.ಗೋಪಾಲಕೃಷ್ಣ ಮೀಟಿಂಗ್​​ನಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಭೆಯಲ್ಲಿ ನಾಡಗೌಡರು ಕಣ್ಣೀರು ಹಾಕಿರುವ ಪ್ರಸಂಗ ನಡೆದಿದೆ. ತಾನು ಸಚಿವನಾಗಬೇಕೆಂದು ಬಹಳಷ್ಟು ಜನ ಬಯಸಿದ್ದರು. ಆದರೆ ಇವತ್ತು ಹೀಗಾಗಿದೆ ಎಂದವರು ಭಾವುಕರಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Aug 03, 2026 06:29 PM
Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More