ದಾವಣಗೆರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಚನ್ನಗಿರಿಯಲ್ಲಿ ಪತ್ತೆ

Edited By:

Updated on: Oct 02, 2026 | 11:42 AM

ದಾವಣಗೆರೆಯಲ್ಲಿ ನಾಪತ್ತೆಯಾಗಿದ್ದ ಪುಷ್ಪಾ ಮಹಲಿಂಗಪ್ಪ ಶಾಲೆಯ 9ನೇ ತರಗತಿ ವಿದ್ಯಾರ್ಥಿ ದಿಗಂತ್ ಚನ್ನಗಿರಿಯಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದ್ದಾನೆ. ಬಸ್ ಏಜೆಂಟ್‌ರೊಬ್ಬರ ಫೋನ್‌ನಿಂದ ತಾಯಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಶಾಲೆಯಲ್ಲಿ ಸಹಪಾಠಿಗಳಿಂದ ರಾಗಿಂಗ್ ಮತ್ತು ಹಲ್ಲೆ ಕಾರಣದಿಂದ ಹೊರಗೆ ಹೋಗಿದ್ದ ಎಂದು ಆರೋಪಿಸಲಾಗಿದೆ.

ದಾವಣಗೆರೆ, ಅಕ್ಟೋಬರ್ 2: ದಾವಣಗೆರೆಯಿಂದ ನಾಪತ್ತೆಯಾಗಿದ್ದ ಪುಷ್ಪಾ ಮಹಲಿಂಗಪ್ಪ ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿ ದಿಗಂತ್ ಚನ್ನಗಿರಿಯಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದ್ದಾನೆ. ಬಸ್ ಏಜೆಂಟರೊಬ್ಬರ ಫೋನ್‌ನಿಂದ ತಾಯಿಗೆ ಕರೆ ಮಾಡಿ ತಾನು ಇರುವ ಸ್ಥಳದ ಬಗ್ಗೆ ಮಾಹಿತಿ ನೀಡಿದ ನಂತರ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ದಿಗಂತ್ ನಾಪತ್ತೆಯಿಂದಾಗಿ ಆತನ ಪೋಷಕರು ತೀವ್ರ ಆತಂಕಕ್ಕೊಳಗಾಗಿದ್ದರು ಮತ್ತು ಶಾಲೆಯ ಬಳಿ ಕಣ್ಣೀರು ಹಾಕಿದ್ದರು. ಘಟನೆಗೆ ಶಾಲೆಯೊಳಗಿನ ರಾಗಿಂಗ್ ಮತ್ತು ಸಹಪಾಠಿಗಳಿಂದ ನಿರಂತರ ಕಿರುಕುಳವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಕಳೆದ 15 ದಿನಗಳ ಹಿಂದೆ ದಿಗಂತ್ ಮೇಲೆ ಹಲ್ಲೆ ನಡೆಸಿ, ಬಾಯಿ ಮತ್ತು ಮೂಗಿನಿಂದ ರಕ್ತ ಬಂದಿತ್ತು ಎಂದು ಆರೋಪಿಸಲಾಗಿದೆ. ಇದೇ ಕಾರಣದಿಂದ ನಿರಂತರ ಕಿರುಕುಳಕ್ಕೆ ಬೇಸತ್ತು ದಿಗಂತ್ ಶಾಲೆಯಿಂದ ಹೊರ ಹೋಗಿದ್ದಾಗಿ ಹೇಳಲಾಗಿದೆ.

ಇದು ಪುಷ್ಪಾ ಮಹಲಿಂಗಪ್ಪ ಶಾಲೆಯಲ್ಲಿ ನಡೆದ ಎರಡನೇ ಇಂತಹ ಪ್ರಕರಣವಾಗಿದೆ. ಸದ್ಯ ಜಿಲ್ಲಾಧಿಕಾರಿಗಳು ಇಂತಹ ವಸತಿ ಶಾಲೆಗಳಿಗೆ ಭೇಟಿ ನೀಡಲು ಚಿಂತನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More