5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
MLC 2025 Mitchell Owen: ಈ ಗುರಿಯನ್ನು ಬೆನ್ನತ್ತಿದ ಸ್ಯಾನ್ ಫ್ರಾನಿಸ್ಕೋ ಯುನಿಕಾರ್ನ್ಸ್ ತಂಡವು 10 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 97 ರನ್ ಕಲೆಹಾಕಿದ್ದರು. ಇನ್ನುಳಿದ 10 ಓವರ್ಗಳಲ್ಲಿ ಕೇವಲ 73 ರನ್ಗಳು ಮಾತ್ರ. ಈ ಹಂತದಲ್ಲಿ ದಾಳಿಗಿಳಿದ ಮಿಚೆಲ್ ಓವನ್ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು.
ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ 19ನೇ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ತಂಡ ಜಯಭೇರಿ ಬಾರಿಸಿದೆ. ಈ ಗೆಲುವಿನ ರೂವಾರಿ ಮಿಚೆಲ್ ಓವನ್. ಆದರೆ ಈ ಬಾರಿ ಓವನ್ ಪಂದ್ಯ ಗೆಲ್ಲಿಸಿದ್ದು ಬ್ಯಾಟಿಂಗ್ನಿಂದಲ್ಲ. ಬದಲಾಗಿ ಭರ್ಜರಿ ಬೌಲಿಂಗ್ ಪ್ರದರ್ಶಿಸುವ ಮೂಲಕ ಎಂಬುದು ವಿಶೇಷ.
ಸ್ಯಾನ್ ಫ್ರಾನಿಸ್ಕೋ ಯುನಿಕಾರ್ನ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವಾಷಿಂಗ್ಟನ್ ಫ್ರೀಡಂ ಪರ ಆರಂಭಿಕನಾಗಿ ಕಣಕ್ಕಿಳಿದ ಮಿಚೆಲ್ ಓವನ್ ಶೂನ್ಯಕ್ಕೆ ಔಟಾಗಿದ್ದರು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್ ಫಿಲಿಪ್ಸ್ 3 ಸಿಕ್ಸ್ಗಳೊಂದಿಗೆ 58 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ವಾಷಿಂಗ್ಟನ್ ಫ್ರೀಡಂ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ಸ್ಯಾನ್ ಫ್ರಾನಿಸ್ಕೋ ಯುನಿಕಾರ್ನ್ಸ್ ತಂಡವು 10 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 97 ರನ್ ಕಲೆಹಾಕಿದ್ದರು. ಇನ್ನುಳಿದ 10 ಓವರ್ಗಳಲ್ಲಿ ಕೇವಲ 73 ರನ್ಗಳು ಮಾತ್ರ. ಈ ಹಂತದಲ್ಲಿ ದಾಳಿಗಿಳಿದ ಮಿಚೆಲ್ ಓವನ್ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು.
ಮೀಡಿಯಂ ಫಾಸ್ಟ್ ಬೌಲಿಂಗ್ ಮೂಲಕ ದಾಳಿ ಸಂಘಟಿಸಿದ ಮಿಚೆಲ್ ಓವನ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸುತ್ತಾ ಸಾಗಿದರು. ಅಲ್ಲದೆ 3 ಓವರ್ಗಳಲ್ಲಿ 17 ರನ್ ನೀಡಿ 5 ವಿಕೆಟ್ ಉರುಳಿಸಿದರು. ಪರಿಣಾಮ ಗೆಲುವಿನತ್ತ ಸಾಗಿದ್ದ ಸ್ಯಾನ್ ಫ್ರಾನಿಸ್ಕೋ ಯುನಿಕಾರ್ನ್ಸ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 157 ರನ್ಗಳಿಸಿ 12 ರನ್ಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು.
ಈ ಮೂಲಕ ಮಿಚೆಲ್ ಓವನ್ ಬೌಲಿಂಗ್ ಮೂಲಕ ವಾಷಿಂಗ್ಟನ್ ಫ್ರೀಡಂ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟು, ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

