5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್

Updated on: Jun 29, 2025 | 11:00 AM

MLC 2025 Mitchell Owen: ಈ ಗುರಿಯನ್ನು ಬೆನ್ನತ್ತಿದ ಸ್ಯಾನ್ ಫ್ರಾನಿಸ್ಕೋ ಯುನಿಕಾರ್ನ್ಸ್ ತಂಡವು 10 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 97 ರನ್​ ಕಲೆಹಾಕಿದ್ದರು. ಇನ್ನುಳಿದ 10 ಓವರ್​ಗಳಲ್ಲಿ ಕೇವಲ 73 ರನ್​ಗಳು ಮಾತ್ರ. ಈ ಹಂತದಲ್ಲಿ ದಾಳಿಗಿಳಿದ ಮಿಚೆಲ್ ಓವನ್ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು.

ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ 19ನೇ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ತಂಡ ಜಯಭೇರಿ ಬಾರಿಸಿದೆ. ಈ ಗೆಲುವಿನ ರೂವಾರಿ ಮಿಚೆಲ್ ಓವನ್. ಆದರೆ ಈ ಬಾರಿ ಓವನ್ ಪಂದ್ಯ ಗೆಲ್ಲಿಸಿದ್ದು ಬ್ಯಾಟಿಂಗ್​ನಿಂದಲ್ಲ. ಬದಲಾಗಿ ಭರ್ಜರಿ ಬೌಲಿಂಗ್ ಪ್ರದರ್ಶಿಸುವ ಮೂಲಕ ಎಂಬುದು ವಿಶೇಷ.

ಸ್ಯಾನ್ ಫ್ರಾನಿಸ್ಕೋ ಯುನಿಕಾರ್ನ್ಸ್​ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವಾಷಿಂಗ್ಟನ್ ಫ್ರೀಡಂ ಪರ ಆರಂಭಿಕನಾಗಿ ಕಣಕ್ಕಿಳಿದ ಮಿಚೆಲ್ ಓವನ್ ಶೂನ್ಯಕ್ಕೆ ಔಟಾಗಿದ್ದರು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್ ಫಿಲಿಪ್ಸ್ 3 ಸಿಕ್ಸ್​ಗಳೊಂದಿಗೆ 58 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ವಾಷಿಂಗ್ಟನ್ ಫ್ರೀಡಂ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 169 ರನ್​ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಸ್ಯಾನ್ ಫ್ರಾನಿಸ್ಕೋ ಯುನಿಕಾರ್ನ್ಸ್ ತಂಡವು 10 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 97 ರನ್​ ಕಲೆಹಾಕಿದ್ದರು. ಇನ್ನುಳಿದ 10 ಓವರ್​ಗಳಲ್ಲಿ ಕೇವಲ 73 ರನ್​ಗಳು ಮಾತ್ರ. ಈ ಹಂತದಲ್ಲಿ ದಾಳಿಗಿಳಿದ ಮಿಚೆಲ್ ಓವನ್ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು.

ಮೀಡಿಯಂ ಫಾಸ್ಟ್ ಬೌಲಿಂಗ್ ಮೂಲಕ ದಾಳಿ ಸಂಘಟಿಸಿದ ಮಿಚೆಲ್ ಓವನ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸುತ್ತಾ ಸಾಗಿದರು. ಅಲ್ಲದೆ 3 ಓವರ್​ಗಳಲ್ಲಿ 17 ರನ್ ನೀಡಿ 5 ವಿಕೆಟ್ ಉರುಳಿಸಿದರು. ಪರಿಣಾಮ ಗೆಲುವಿನತ್ತ ಸಾಗಿದ್ದ ಸ್ಯಾನ್ ಫ್ರಾನಿಸ್ಕೋ ಯುನಿಕಾರ್ನ್ಸ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 157 ರನ್​ಗಳಿಸಿ 12 ರನ್​ಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು.

ಈ ಮೂಲಕ ಮಿಚೆಲ್ ಓವನ್ ಬೌಲಿಂಗ್ ಮೂಲಕ ವಾಷಿಂಗ್ಟನ್ ಫ್ರೀಡಂ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟು, ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

Loading...
Unable to load recommendations.
Follow Us
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More