‘ಯಲಾ ಕುನ್ನಿ’ ಚಿತ್ರದಲ್ಲಿ ಕೋಮಲ್ ಜೊತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ

Edited By:

Updated on: Oct 18, 2024 | 8:40 PM

‘ಯಲಾ ಕುನ್ನಿ’ ಎಂಬ ವಜ್ರಮುನಿ ಅವರ ಡೈಲಾಗ್​ನಲ್ಲೇ ಸಿನಿಮಾ ಬರುತ್ತಿದೆ. ಈ ಶೀರ್ಷಿಕೆಯ ಸಿನಿಮಾಗೆ ಕೋಮಲ್ ಅವರು ಹೀರೋ ಆಗಿದ್ದಾರೆ. ಅವರ ಜೊತೆ ನಟ ಮಿತ್ರ ಕೂಡ ಅಭಿನಯಿಸಿದ್ದಾರೆ. ಹಾಸ್ಯ ನಟನಾಗಿ ಗುರುತಿಸಿಕೊಂಡ ಮಿತ್ರ ಅವರು ಈ ಸಿನಿಮಾದಲ್ಲಿ ನೆಗೆಟಿವ್ ಶೆಡ್ ಇರುವ ಪಾತ್ರವನ್ನು ಮಾಡಿದ್ದಾರೆ ಎಂಬುದು ವಿಶೇಷ. ಆ ಬಗ್ಗೆ ಅವರೇ ಮಾತನಾಡಿದ್ದಾರೆ.

‘ಈ ಸಿನಿಮಾದಲ್ಲಿ ಯಲಾ ಕುನ್ನಿ ಯಾರು ಎಂಬ ಪ್ರಶ್ನೆ ಕಾಡುತ್ತದೆ. ಒಳ್ಳೆಯ ಪಾತ್ರ ನನಗೆ ಸಿಕ್ಕಿದೆ. ಹಾಸ್ಯದಲ್ಲೇ ನೆಗೆಟಿವ್ ಶೇಡ್ ಇರುವ ಪಾತ್ರವಿದು. ಸುಗಂಧರಾಜ ಎಂಬುದು ಪಾತ್ರದ ಹೆಸರು. ನಾನು ಖುಷಿಯಿಂದ ಈ ಸಿನಿಮಾವನ್ನು ಮಾಡಿದ್ದೇನೆ. ಗ್ರಾಮ ಪಂಚಾಯಿತಿಯ ರಾಜಕಾರಣಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಹಾಸ್ಯ ಮತ್ತು ವಿಲನ್ ಶೇಡ್​ ಸಿಕ್ಕಿದ್ದಕ್ಕೆ ಖುಷಿ ಆಗಿದೆ. ಕನ್ನಡ ಭಾಷೆಯ ಬಗ್ಗೆಯೂ ಈ ಸಿನಿಮಾದಲ್ಲಿ ಸಂದೇಶ ಇದೆ’ ಎಂದು ಮಿತ್ರಾ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More