ಲೋಕಸಭೆ ಉಪಚುನಾವಣೆ ರೇಸ್‌ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅಂಜಲಿ ನಿಂಬಾಳ್ಕರ್
ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಗೆ ಇನ್ನೂ ದಿನಾಂಕ ಘೋಷಣೆ ಆಗಿಲ್ಲ. ಆದ್ರೇ ಈಗಿನಿಂದಲೇ ಕಾಂಗ್ರೆಸ್ ಪಕ್ಷ ಹೇಗಾದ್ರೂ ಮಾಡಿ ಬೆಳಗಾವಿ ಲೋಕಸಭೆ ಗೆಲ್ಲಬೇಕೆಂದು ಪಣತೊಟ್ಟಿದೆ. ಈ ಕಾರಣಕ್ಕೆ ಘಟಾನುಘಟಿಗಳನ್ನ ಕಣಕ್ಕಿಳಿಸಲು ತಯಾರಿ ನಡೆಸಿದೆ.