ರಸ್ತೆ ಗುಂಡಿ ಕಂಡು ಶಾಸಕ ಅಶೋಕ್ ಕುಮಾರ್ ರೈ ಗರಂ: ನಗರಸಭೆ ಕಮಿಷನರ್​​ಗೆ ಖಡಕ್​ ಎಚ್ಚರಿಕೆ

Edited By:

Updated on: Dec 01, 2025 | 1:13 PM

ರಸ್ತೆ ಗುಂಡಿಗಳ ವಿಚಾರವಾಗಿ ಪುತ್ತೂರು ಶಾಸಕ ಅಶೋಕ್ ರೈ ಅವರು ನಗರಸಭೆ ಕಮಿಷನರ್​ಗೆ ದೂರವಾಣಿ ಮೂಲಕ ತರಾಟೆ ತೆಗೆದುಕೊಂಡಿದ್ದಾರೆ. ರಸ್ತೆ ಗುಂಡಿಗಳ ದುರಸ್ತಿ ವಿಳಂಬದ ಬಗ್ಗೆ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಕೆಲಸ ಆರಂಭಿಸುವಂತೆ ಸೂಚಿಸಿದ್ದಾರೆ. ಅಲ್ಲದೆ, ನಿರ್ಲಕ್ಷ್ಯ ಮುಂದುವರಿದರೆ ತಾವೇ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿದ್ದಾರೆ.

ಮಂಗಳೂರು, ಡಿಸೆಂಬರ್​​ 01: ರಸ್ತೆ ಗುಂಡಿಗಳ ವಿಚಾರವಾಗಿ ಪುತ್ತೂರು ನಗರಸಭೆ ಕಮಿಷನರ್​ಗೆ ದೂರವಾಣಿ ಕರೆ ಮಾಡಿ ಶಾಸಕ ಅಶೋಕ್ ಕುಮಾರ್ ರೈ ತರಾಟೆಗೆ ಪಡೆದಿದ್ದಾರೆ. ಕಾರಿನಲ್ಲಿ ಹೋಗುವಾಗ ರಸ್ತೆ ಗುಂಡಿಗಳನ್ನು ಕಂಡು ಗರಂ ಆದ ಶಾಸಕರು, ರಸ್ತೆ ಗುಂಡಿಗಳನ್ನು ಮುಚ್ಚಿ ಎಂದು ಎಷ್ಟು ಸಲ ಹೇಳಬೇಕು. ನಾನು ಹೇಳೋ ಭಾಷೆ ನಿಮಗೆ ಅರ್ಥವಾಗುತ್ತೋ ಇಲ್ಲವೋ? ಎಲ್ಲದಕ್ಕೂ ಇಂಜಿನಿಯರ್ ಅಂದ್ರೆ ಕಮಿಷನರ್ ಆಗಿ ನೀವು ಏಕೆ? ಎಲ್ಲದ್ದಕ್ಕೂ ಕೆಳ ಹಂತದ ಅಧಿಕಾರಗಳತ್ತ ಕೈ ತೋರಿಸುತ್ತೀರಾ? ಈ ರಸ್ತೆಯಲ್ಲಿ ಹೋಗುವ ಜನ ಇಲ್ಲಿ ಸಾಯುತ್ತಿದ್ದಾರೆ. ಹೀಗಿರುವಾಗ ಮುಂದಿನ ಮಳೆಗಾಲದವರೆಗೂ ಕಾಲ ಕಳೆಯುತ್ತೀರಾ? ನಾಳೆ ಕೆಲಸ ಆಗದಿದ್ರೆ ಮತ್ತೆ ಏನು ಮಾಡುತ್ತೇನೆ ಅಂತಾ ನೋಡಿ ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Dec 01, 2025 01:13 PM
Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More