ಅತ್ತ ಗ್ಯಾಸ್​​ಗಾಗಿ ಆಟೋ ಚಾಲಕರ ಪರದಾಟ: ಇತ್ತ ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು

Updated on: Apr 04, 2026 | 2:45 PM

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಆರ್‌ಸಿಬಿ vs ಸಿಎಸ್‌ಕೆ ಐಪಿಎಲ್ ಪಂದ್ಯದ ಟಿಕೆಟ್‌ಗಾಗಿ ವಿಧಾನಸೌಧದಲ್ಲಿ ಶಾಸಕರ ಆಪ್ತ ಸಹಾಯಕರು ಸರತಿ ಸಾಲಿನಲ್ಲಿ ನಿಂತಿದ್ದರು. ಸ್ಪೀಕರ್ ಆಪ್ತ ಕಾರ್ಯದರ್ಶಿ ಮಹೇಶ್ ಕರ್ಜಗಿ ಕೊಠಡಿಯಲ್ಲಿ ಶಾಸಕರಿಗೆ ತಲಾ ಮೂರು ಉಚಿತ ಐಪಿಎಲ್ ಟಿಕೆಟ್‌ಗಳನ್ನು ವಿತರಿಸಲಾಯಿತು.

ಬೆಂಗಳೂರು, ಏಪ್ರಿಲ್​ 04: ಗಲ್ಫ್​​​ ರಾಷ್ಟ್ರಗಳಲ್ಲಿನ ಯುದ್ಧದಿಂದ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಇತ್ತ ಗ್ಯಾಸ್​ಗಾಗಿ ಬಂಕ್​ಗಳ ಮುಂದೆ ಆಟೋ ಚಾಲಕರು ಕ್ಯೂನಿಂತಿದ್ದಾರೆ. ಈ ಮಧ್ಯೆ ವಿಧಾನಸೌಧದಲ್ಲಿ ಐಪಿಎಲ್ ಟಿಕೆಟ್​ಗಾಗಿ ಶಾಸಕರ ಪಿಎಗಳು ಕ್ಯೂನಿಂತಿದ್ದಾರೆ. ನಾಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ನಡುವೆ ಪಂದ್ಯ ನಡೆಯಲಿದೆ. ಹೀಗಾಗಿ ವಿಧಾನಸೌಧದ ಸ್ಪೀಕರ್ ಆಪ್ತ ಕಾರ್ಯದರ್ಶಿ ಮಹೇಶ್ ಕರ್ಜಗಿ ಕೊಠಡಿಯಲ್ಲಿ ಪ್ರತಿಯೊಬ್ಬ ಶಾಸಕರಿಗೆ ತಲಾ 3 ಐಪಿಎಲ್ ಟಿಕೆಟ್ ವಿತರಣೆ ಮಾಡಲಾಗಿದೆ. ಸರತಿಸಾಲಿನಲ್ಲಿ ನಿಂತು ಶಾಸಕರ ಪಿಎಗಳು ಟಿಕೆಟ್ ಪಡೆದುಕೊಂಡಿದ್ದಾರೆ.

ವರದಿ: ಈರಣ್ಣ ಬಸವ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More