ಬದ್ಧ ವೈರಿಗಳ ಸಮಾಗಮ: ಎದುರು ಬದುರು ಕುಳಿತು ವಿಜಯೇಂದ್ರ-ಯತ್ನಾಳ್ ಮಾತುಕತೆ, ವಿಡಿಯೋ ನೋಡಿ
ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಯಾರೂ ಶಾಶ್ವತ ಮಿತ್ರರಲ್ಲ ಎಂಬುವುದು ಅಕ್ಷರಶಃ ಸತ್ಯ. ಇದಕ್ಕೆ ಪೂರಕವೆಂಬಂತೆ ರಾಜಕೀಯ ಹಾಗೂ ವೈಯಕ್ತಿವಾಗಿಯೂ ಬದ್ಧ ವೈರಿಗಳಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿವೈ ವಿಜಯೇಂದ್ರ ಪರಸ್ಪರ ಭೇಟಿಯಾಗಿದ್ದಾರೆ. ಹೌದು....ಅಚ್ಚರಿ ಅನ್ನಿಸಿದರೂ ಸತ್ಯ. ಧಾರವಾಡ ಜಿಲ್ಲೆ ಛಬ್ಬಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಉಭಯ ನಾಯಕರು ಭೇಟಿಯಾಗಿದ್ದಾರೆ.
ಬೆಂಗಳೂರು/ಧಾರವಾಡ, (ಅಕ್ಟೋಬರ್ 18): ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಯಾರೂ ಶಾಶ್ವತ ಮಿತ್ರರಲ್ಲ ಎಂಬುವುದು ಅಕ್ಷರಶಃ ಸತ್ಯ. ಇದಕ್ಕೆ ಪೂರಕವೆಂಬಂತೆ ರಾಜಕೀಯ ಹಾಗೂ ವೈಯಕ್ತಿವಾಗಿಯೂ ಬದ್ಧ ವೈರಿಗಳಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿವೈ ವಿಜಯೇಂದ್ರ ಪರಸ್ಪರ ಭೇಟಿಯಾಗಿದ್ದಾರೆ. ಹೌದು….ಅಚ್ಚರಿ ಅನ್ನಿಸಿದರೂ ಸತ್ಯ. ಧಾರವಾಡ ಜಿಲ್ಲೆ ಛಬ್ಬಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಉಭಯ ನಾಯಕರು ಮುಖಾಮುಖಿಯಾಗಿ ಕುಳಿತು ಮಾತುಕತೆ ನಡೆಸಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಎಸ್ ಯಡಿಯೂರಪ್ಪ ವಿರುದ್ಧ ಆರೋಪಗಳ ಮೇಲೆ ಆರೋಪ ಮಾಡಿದ್ದರಿಂದಲೇ ಬಿಜೆಪಿಯಿಂದ ಉಚ್ಛಾಟನೆಗೊಂಡಿದ್ದಾರೆ. ಉಚ್ಛಾಟನೆಗೂ ಮುನ್ನ ಹಲವು ಶೋಕಾಸ್ ನೀಡಿದರೂ ಕೇರ್ ಮಾಡದ ಯತ್ನಾಳ್ ಬಹಿರಂಗವಾಗಿಯೇ ಬಿಎಸ್ವೈ ಕುಟುಂಬದ ವಿರುದ್ಧ ಬಹಿರಂಗವಾಗಿ ವಾಚಾಮಗೋಚರವಾಗಿ ಬೈಯುತ್ತಲೇ ಬಂದಿದ್ದಾರೆ. ಆದ್ರೆ, ಇದೀಗ ಯತ್ನಾಳ್ -ವಿಜಯೇಂದ್ರ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.
ಈ ಭೇಟಿ ಕೇವಲ ಸೌಜನ್ಯದ ಮಾತುಕತೆಯೇ ಅಥವಾ ಉಭಯ ನಾಯಕರ ನಡುವಿನ ರಾಜಕೀಯ ಸಂಬಂಧ ಸುಧಾರಿಸುವ ಮುನ್ಸೂಚನೆಯೇ ಎಂಬ ಪ್ರಶ್ನೆ ಇದೀಗ ಮುನ್ನೆಲೆಗೆ ಬಂದಿದೆ. ಆದರೆ, ಈ ಮಾತುಕತೆಯಿಂದಲೇ ಹಿಂದಿನ ಭಿನ್ನಾಭಿಪ್ರಾಯಗಳಿಗೆ ಸಂಪೂರ್ಣ ತೆರೆ ಬಿದ್ದಿದೆ ಎಂದು ಹೇಳಲು ಸಾಧ್ಯವಿಲ್ಲ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 18, 2026 09:21 PM
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್ ಕೌಂಟರ್

