ಬದ್ಧ ವೈರಿಗಳ ಸಮಾಗಮ: ಎದುರು ಬದುರು ಕುಳಿತು ವಿಜಯೇಂದ್ರ-ಯತ್ನಾಳ್ ಮಾತುಕತೆ, ವಿಡಿಯೋ ನೋಡಿ

Edited By:

Updated on: Oct 18, 2026 | 10:36 PM

ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಯಾರೂ ಶಾಶ್ವತ ಮಿತ್ರರಲ್ಲ ಎಂಬುವುದು ಅಕ್ಷರಶಃ ಸತ್ಯ. ಇದಕ್ಕೆ ಪೂರಕವೆಂಬಂತೆ ರಾಜಕೀಯ ಹಾಗೂ ವೈಯಕ್ತಿವಾಗಿಯೂ ಬದ್ಧ ವೈರಿಗಳಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿವೈ ವಿಜಯೇಂದ್ರ ಪರಸ್ಪರ ಭೇಟಿಯಾಗಿದ್ದಾರೆ. ಹೌದು....ಅಚ್ಚರಿ ಅನ್ನಿಸಿದರೂ ಸತ್ಯ. ಧಾರವಾಡ ಜಿಲ್ಲೆ ಛಬ್ಬಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಉಭಯ ನಾಯಕರು ಭೇಟಿ‌ಯಾಗಿದ್ದಾರೆ.

ಬೆಂಗಳೂರು/ಧಾರವಾಡ, (ಅಕ್ಟೋಬರ್ 18): ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಯಾರೂ ಶಾಶ್ವತ ಮಿತ್ರರಲ್ಲ ಎಂಬುವುದು ಅಕ್ಷರಶಃ ಸತ್ಯ. ಇದಕ್ಕೆ ಪೂರಕವೆಂಬಂತೆ ರಾಜಕೀಯ ಹಾಗೂ ವೈಯಕ್ತಿವಾಗಿಯೂ ಬದ್ಧ ವೈರಿಗಳಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿವೈ ವಿಜಯೇಂದ್ರ ಪರಸ್ಪರ ಭೇಟಿಯಾಗಿದ್ದಾರೆ. ಹೌದು….ಅಚ್ಚರಿ ಅನ್ನಿಸಿದರೂ ಸತ್ಯ. ಧಾರವಾಡ ಜಿಲ್ಲೆ ಛಬ್ಬಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಉಭಯ ನಾಯಕರು ಮುಖಾಮುಖಿಯಾಗಿ ಕುಳಿತು ಮಾತುಕತೆ ನಡೆಸಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಎಸ್ ಯಡಿಯೂರಪ್ಪ ವಿರುದ್ಧ ಆರೋಪಗಳ ಮೇಲೆ ಆರೋಪ ಮಾಡಿದ್ದರಿಂದಲೇ ಬಿಜೆಪಿಯಿಂದ ಉಚ್ಛಾಟನೆಗೊಂಡಿದ್ದಾರೆ. ಉಚ್ಛಾಟನೆಗೂ ಮುನ್ನ ಹಲವು ಶೋಕಾಸ್ ನೀಡಿದರೂ ಕೇರ್ ಮಾಡದ ಯತ್ನಾಳ್ ಬಹಿರಂಗವಾಗಿಯೇ ಬಿಎಸ್​​ವೈ ಕುಟುಂಬದ ವಿರುದ್ಧ ಬಹಿರಂಗವಾಗಿ ವಾಚಾಮಗೋಚರವಾಗಿ ಬೈಯುತ್ತಲೇ ಬಂದಿದ್ದಾರೆ. ಆದ್ರೆ, ಇದೀಗ ಯತ್ನಾಳ್ -ವಿಜಯೇಂದ್ರ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

ಈ ಭೇಟಿ ಕೇವಲ ಸೌಜನ್ಯದ ಮಾತುಕತೆಯೇ ಅಥವಾ ಉಭಯ ನಾಯಕರ ನಡುವಿನ ರಾಜಕೀಯ ಸಂಬಂಧ ಸುಧಾರಿಸುವ ಮುನ್ಸೂಚನೆಯೇ ಎಂಬ ಪ್ರಶ್ನೆ ಇದೀಗ ಮುನ್ನೆಲೆಗೆ ಬಂದಿದೆ. ಆದರೆ, ಈ ಮಾತುಕತೆಯಿಂದಲೇ ಹಿಂದಿನ ಭಿನ್ನಾಭಿಪ್ರಾಯಗಳಿಗೆ ಸಂಪೂರ್ಣ ತೆರೆ ಬಿದ್ದಿದೆ ಎಂದು ಹೇಳಲು ಸಾಧ್ಯವಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 18, 2026 09:21 PM
Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More