AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ಆರ್. ಪಾಟೀಲ್ ಗರಂ: ಪ್ರಣಾಳಿಕೆ ಭರವಸೆ ಈಡೇರದ್ದಕ್ಕೆ ಆಕ್ರೋಶ

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ಆರ್. ಪಾಟೀಲ್ ಗರಂ: ಪ್ರಣಾಳಿಕೆ ಭರವಸೆ ಈಡೇರದ್ದಕ್ಕೆ ಆಕ್ರೋಶ

ಪ್ರಸನ್ನ ಗಾಂವ್ಕರ್​
| Edited By: |

Updated on: Sep 26, 2026 | 12:29 PM

Share

ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ತಮ್ಮದೇ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಾರೆ. ಪ್ರಣಾಳಿಕೆಯ ಭರವಸೆಗಳು ಈಡೇರದ ಬಗ್ಗೆ, ವಿಶೇಷವಾಗಿ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಕುರಿತು ಬಜೆಟ್‌ನಲ್ಲಿ ನೀಡಿದ ಭರವಸೆ ಮರೆಯಾದ ಬಗ್ಗೆ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 26: ಕಾಂಗ್ರೆಸ್ ಶಾಸಕ ಬಿ.ಆರ್.  ಪಾಟೀಲ್ ತಮ್ಮದೇ ರಾಜ್ಯ ಸರ್ಕಾರದ ವಿರುದ್ಧ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾವು ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಸರ್ಕಾರ ಮರೆತಿದೆ ಎಂದು ಅವರು ಆರೋಪಿಸಿದ್ದಾರೆ. ವಿಶೇಷವಾಗಿ, 79A, B, C ಭೂಸುಧಾರಣಾ ಕಾಯ್ದೆಗಳಿಗೆ ತಿದ್ದುಪಡಿ ತರುವ ವಿಷಯದಲ್ಲಿ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ ಎಂದು ಅವರು ದೂರಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದಾಗ, ಈ ತಿದ್ದುಪಡಿಗಳನ್ನು ಬಜೆಟ್‌ನಲ್ಲಿ ಸೇರಿಸಲು ಒಪ್ಪಿಗೆ ನೀಡಲಾಗಿತ್ತು. ಆದರೆ, ಅಂತಿಮವಾಗಿ ಸದನದಲ್ಲಿ ಮಂಡನೆಯಾದ ಬಜೆಟ್ ಪ್ರತಿಯಲ್ಲಿ ಈ ಪ್ರಸ್ತಾಪ ಮಾಯವಾಗಿತ್ತು ಎಂದು ಪಾಟೀಲ್ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More