ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ: ಬೆಂಬಲಿಗರಿಂದ ಹೈಡ್ರಾಮಾ
5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಕರೆತರುವಾಗ ಲಕ್ಷ್ಮೇಶ್ವರದಲ್ಲಿ ಬೆಂಬಲಿಗರು ವಾಹನಕ್ಕೆ ಅಡ್ಡಗಟ್ಟಿ ತೀವ್ರ ಹೈಡ್ರಾಮಾ ನಡೆಸಿದ್ದಾರೆ. ಬಳಿಕ ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿದೆ.
ಗದಗ, ಫೆಬ್ರವರಿ 22: 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ಕರೆತರುವಾಗ ಬೆಂಬಲಿಗರು ಲಕ್ಷ್ಮೇಶ್ವರದಲ್ಲಿ ವಾಹನ ಅಡ್ಡಗಟ್ಟಿ ತೀವ್ರ ಹೈಡ್ರಾಮಾ ನಡೆಸಿದ್ದಾರೆ. ಶಾಸಕರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನವನ್ನು ಬೆಂಬಲಿಗರು ತಡೆಯಲು ಯತ್ನಿಸಿದ್ದು, ಪರಿಸ್ಥಿತಿ ಕೆಲಕಾಲ ಉದ್ವಿಗ್ನಗೊಂಡಿತ್ತು. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ ಪ್ರಸಂಗ ನಡೆದಿದೆ. ಈ ವೇಳೆ, ಮಾಧ್ಯಮದವರು ಶಾಸಕ ಚಂದ್ರು ಲಮಾಣಿ ಅವರ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಿದರು. ಆದರೆ, ಶಾಸಕರು ಯಾವುದೇ ಹೇಳಿಕೆ ನೀಡಲಿಲ್ಲ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Feb 22, 2026 08:03 AM
Follow Us
Latest Videos
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ

