AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಸಮಸ್ಯೆ ಪರಿಹಾರಕ್ಕೆ ಆ್ಯಪ್​: ವಿನೂತನ ಪ್ರಯತ್ನಕ್ಕೆ ಕೈಹಾಕಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ

ಜನರ ಸಮಸ್ಯೆ ಪರಿಹಾರಕ್ಕೆ ಆ್ಯಪ್​: ವಿನೂತನ ಪ್ರಯತ್ನಕ್ಕೆ ಕೈಹಾಕಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ

ದಿಲೀಪ್​, ಚೌಡಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 31, 2025 | 10:36 AM

Share

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ವಿನೂತನ ಪ್ರಯತ್ನದ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಮುಂದಾಗಿದ್ದಾರೆ. ಅವರು ಅಭಿವೃದ್ಧಿಪಡಿಸಿದ ಮೊಬೈಲ್ ಅಪ್ಲಿಕೇಶನ್ ಮೂಲಕ ಜನರು ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಬಹುದಾಗಿದೆ. ಈ ಅಪ್ಲಿಕೇಶನ್ ಸರ್ಕಾರಿ ಅಧಿಕಾರಿಗಳಿಗೆ ಸಮಸ್ಯೆಗಳನ್ನು ತಲುಪಿಸುತ್ತದೆ ಮತ್ತು ಪರಿಹಾರದ ಮೇಲ್ವಿಚಾರಣೆ ಮಾಡಲಿದೆ.

ಮಂಡ್ಯ, ಜುಲೈ 31: ಮೇಲುಕೋಟೆ ಕ್ಷೇತ್ರದ ಜನರ ಸಮಸ್ಯೆ ಪರಿಹಾರಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ (Darshan Puttannaiah) ವಿಶೇಷ ಆ್ಯಪ್​ ಅಭಿವೃದ್ಧಿ ಪಡಿಸಿದ್ದಾರೆ. ಆ ಮೂಲಕ ವಿನೂತನ ಪ್ರಯತ್ನಕ್ಕೆ ಮುನ್ನುಡಿ ಬರೆದಿದ್ದಾರೆ. ತಾವು ವಿದೇಶದಲ್ಲಿ ಕಲಿತ ವಿದ್ಯೆಯನ್ನೇ ಜನ ಸೇವೆಗೆ ಸದ್ಭಳಕೆ ಮಾಡುತ್ತಿದ್ದಾರೆ. ನೂತನ ಮೊಬೈಲ್ ತಂತ್ರಜ್ಞಾನದ ಮೂಲಕ ಕ್ಷೇತ್ರದ ಜನರ ಸಮಸ್ಯೆ ನಿವಾರಣೆ ಮಾಡಲಿದ್ದಾರೆ. ಈ ಹಿಂದೆ ಅಮೆರಿಕಾದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ದರ್ಶನ್ ಪುಟ್ಟಣ್ಣಯ್ಯ ಅವರು  ಸ್ವಂತ ಉದ್ದಿಮೆ ಆರಂಭಿಸಿದ್ದರು. ಇದೀಗ ತಮ್ಮ ಮೂಲ ವೃತ್ತಿ ಮೂಲಕ ಜನರಿಗೆ ಸ್ಪಂದಿಸಲು ಮುಂದಾಗಿದ್ದಾರೆ. ಸರ್ಕಾರಿ ಕಚೇರಿಗಳಿಗೆ ಜನ ಅಲೆಯುವುದನ್ನ ತಪ್ಪಿಸಲು ನೂತನ ಮೊಬೈಲ್ ಆ್ಯಪ್​​ ಸಿದ್ಧಪಡಿಸಲಾಗಿದೆ. ಜನರ ಸಮಸ್ಯೆ ಹಾಗೂ ಬೇಡಿಕೆ ಆಲಿಸಿ, ಪಟ್ಟಿ ಮಾಡಲು ವಿಶೇಷ ತಂಡ ರಚನೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jul 31, 2025 10:35 AM