ಜನರ ಸಮಸ್ಯೆ ಪರಿಹಾರಕ್ಕೆ ಆ್ಯಪ್: ವಿನೂತನ ಪ್ರಯತ್ನಕ್ಕೆ ಕೈಹಾಕಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ
ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ವಿನೂತನ ಪ್ರಯತ್ನದ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಮುಂದಾಗಿದ್ದಾರೆ. ಅವರು ಅಭಿವೃದ್ಧಿಪಡಿಸಿದ ಮೊಬೈಲ್ ಅಪ್ಲಿಕೇಶನ್ ಮೂಲಕ ಜನರು ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಬಹುದಾಗಿದೆ. ಈ ಅಪ್ಲಿಕೇಶನ್ ಸರ್ಕಾರಿ ಅಧಿಕಾರಿಗಳಿಗೆ ಸಮಸ್ಯೆಗಳನ್ನು ತಲುಪಿಸುತ್ತದೆ ಮತ್ತು ಪರಿಹಾರದ ಮೇಲ್ವಿಚಾರಣೆ ಮಾಡಲಿದೆ.
ಮಂಡ್ಯ, ಜುಲೈ 31: ಮೇಲುಕೋಟೆ ಕ್ಷೇತ್ರದ ಜನರ ಸಮಸ್ಯೆ ಪರಿಹಾರಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ (Darshan Puttannaiah) ವಿಶೇಷ ಆ್ಯಪ್ ಅಭಿವೃದ್ಧಿ ಪಡಿಸಿದ್ದಾರೆ. ಆ ಮೂಲಕ ವಿನೂತನ ಪ್ರಯತ್ನಕ್ಕೆ ಮುನ್ನುಡಿ ಬರೆದಿದ್ದಾರೆ. ತಾವು ವಿದೇಶದಲ್ಲಿ ಕಲಿತ ವಿದ್ಯೆಯನ್ನೇ ಜನ ಸೇವೆಗೆ ಸದ್ಭಳಕೆ ಮಾಡುತ್ತಿದ್ದಾರೆ. ನೂತನ ಮೊಬೈಲ್ ತಂತ್ರಜ್ಞಾನದ ಮೂಲಕ ಕ್ಷೇತ್ರದ ಜನರ ಸಮಸ್ಯೆ ನಿವಾರಣೆ ಮಾಡಲಿದ್ದಾರೆ. ಈ ಹಿಂದೆ ಅಮೆರಿಕಾದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ದರ್ಶನ್ ಪುಟ್ಟಣ್ಣಯ್ಯ ಅವರು ಸ್ವಂತ ಉದ್ದಿಮೆ ಆರಂಭಿಸಿದ್ದರು. ಇದೀಗ ತಮ್ಮ ಮೂಲ ವೃತ್ತಿ ಮೂಲಕ ಜನರಿಗೆ ಸ್ಪಂದಿಸಲು ಮುಂದಾಗಿದ್ದಾರೆ. ಸರ್ಕಾರಿ ಕಚೇರಿಗಳಿಗೆ ಜನ ಅಲೆಯುವುದನ್ನ ತಪ್ಪಿಸಲು ನೂತನ ಮೊಬೈಲ್ ಆ್ಯಪ್ ಸಿದ್ಧಪಡಿಸಲಾಗಿದೆ. ಜನರ ಸಮಸ್ಯೆ ಹಾಗೂ ಬೇಡಿಕೆ ಆಲಿಸಿ, ಪಟ್ಟಿ ಮಾಡಲು ವಿಶೇಷ ತಂಡ ರಚನೆ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 31, 2025 10:35 AM