ಡಿವೈಡರ್ ಹತ್ತಿಸಿ ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಶಾಸಕ ಜನಾರ್ದನ ರೆಡ್ಡಿ ಕಾರು

Edited By:

Updated on: Oct 06, 2024 | 8:09 AM

ಸಿಎಂ ಸಿದ್ದರಾಮಯ್ಯ ವಾಹನಕ್ಕೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಕಾರು ವಿರುದ್ಧ ದಿಕ್ಕಿನಲ್ಲಿ ಬಂದಿರುವಂತಹ ಘಟನೆ ನಿನ್ನೆ ರಾತ್ರಿ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಸಿಬಿಎಸ್​ ವೃತ್ತದಲ್ಲಿ ನಡೆದಿದೆ. ಈ ವೇಳೆ ಸ್ವತಃ ಜನಾರ್ದನ ರೆಡ್ಡಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಟ್ರಾಫಿಕ್ ಜಾಮ್ ಆಗಿದ್ದರಿಂದ ರೆಡ್ಡಿ ಕಾರ್ ಚಾಲಕ ಡಿವೈಡರ್ ಹತ್ತಿಸಿದ್ದಾರೆ.

ಕೊಪ್ಪಳ, ಅಕ್ಟೋಬರ್​​ 06: ರಾಯಚೂರಿನಿಂದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಇದ್ದ ವಾಹನ ತೆರಳುತ್ತಿದ್ದಾಗ ಸ್ವತಃ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಕೂಡ ವಿರುದ್ಧ ದಿಕ್ಕಿನಲ್ಲಿ ಚಲಿಸಿರುವಂತಹ ಘಟನೆ ಜಿಲ್ಲೆಯ ಗಂಗಾವತಿ ನಗರದ ಸಿಬಿಎಸ್ ವೃತ್ತದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಸಿಎಂ ಬಂದ ಹಿನ್ನಲ್ಲೆ ಜೀರೊ ಟ್ರಾಪಿಕ್ ಮಾಡಲಾಗಿದೆ. ಸುಮಾರು 20 ನಿಮಿಷ ಟ್ರಾಫಿಕ್ ಜಾಮ್ ಆಗಿದ್ದರಿಂದ ಡಿವೈಡರ್ ದಾಟಿ ಒನ್ ವೇನಲ್ಲಿ‌ ವಿರುದ್ಧ ದಿಕ್ಕಿಗೆ ರೆಡ್ಡಿ ಚಾಲಕ ಕಾರು ಚಲಾಯಿಸಿದ್ದಾರೆ. ಸ್ವಲ್ಪ ವ್ಯತ್ಯಾಸ ಆಗಿದ್ದರೂ ಭಾರಿ ಅನಾಹುತ ನಡೆಯುತ್ತಿತ್ತು. ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More