ಅಯ್ಯಪ್ಪ ಮಾಲಾಧಾರಿಗಳ ಪಾದಕ್ಕೆ ನಮಸ್ಕರಿಸಿ ಆಶೀರ್ವಾದ ಪಡೆದ ಶಾಸಕ ಗುರುರಾಜ್ ಗಂಟಿಹೊಳೆ, ವಿಡಿಯೋ ವೈರಲ್
ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ 40 ಜನ ಅಯ್ಯಪ್ಪ ಮಾಲಾಧಾರಿಗಳ ಪಾದಕ್ಕೆ ನಮಸ್ಕರಿಸುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ದೇವಳದಲ್ಲಿ ಇರುಮುಡಿ ಕಟ್ಟುತ್ತಿದ್ದ ಹಿರಿಯರು ಕಿರಿಯರು ಸೇರಿದಂತೆ 40 ಜನ ಅಯ್ಯಪ್ಪ ಮಾಲಾಧಾರಿಗಳ ಕಾಲಿಗೆ ಶಾಸಕ ಗುರುರಾಜ ಗಂಟಿಹೊಳೆ ನಮಸ್ಕರಿಸುವ ಮೂಲಕ ಆಶೀರ್ವಾದ ಪಡೆದಿದ್ದಾರೆ.
ಉಡುಪಿ, ಡಿ.02: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ (MLA Gururaj Gantihole) ಈಗ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ಕಳೆದ ಬಾರಿ ಬರಿಗಾಲ ಸಂತನಂತೆ ಬರಿಗಾಲಿನಲ್ಲಿ ಬ್ಯಾಗ್ ಹಿಡಿದು ರೈಲ್ವೆ ನಿಲ್ದಾಣದಲ್ಲಿ ಓಡಾಡಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹವಾ ಕ್ರಿಯೆಟ್ ಮಾಡಿತ್ತು. ಈಗ ಮತ್ತೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ 40 ಜನ ಅಯ್ಯಪ್ಪ ಮಾಲಾಧಾರಿಗಳ (Ayyappa Maladhari) ಪಾದಕ್ಕೆ ನಮಸ್ಕರಿಸುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಬೈಂದೂರು ತಾಲೂಕಿನ ಮುದ್ದೂರು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಶಬರಿಮಲೆಗೆ ಹೊರಡುವ ಸಿದ್ಧತೆಯಲ್ಲಿದ್ದರು. ದೇವಳದಲ್ಲಿ ಇರುಮುಡಿ ಕಟ್ಟುತ್ತಿದ್ದ ಹಿರಿಯರು ಕಿರಿಯರು ಸೇರಿದಂತೆ 40 ಜನ ಅಯ್ಯಪ್ಪ ಮಾಲಾಧಾರಿಗಳ ಕಾಲಿಗೆ ಶಾಸಕ ಗುರುರಾಜ ಗಂಟಿಹೊಳೆ ನಮಸ್ಕರಿಸುವ ಮೂಲಕ ಆಶೀರ್ವಾದ ಪಡೆದಿದ್ದಾರೆ. ಓರ್ವ ಶಾಸಕ ಸಾಮಾನ್ಯ ನಾಗರೀಕನಂತೆ ಅಯ್ಯಪ್ಪ ಸ್ವಾಮಿ ವ್ರತಧಾರಿಗಳ ಕಾಲಿಗೆ ಎರಗಿ ನಮಸ್ಕರಿಸಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಶಾಸಕರ ಈ ನಡೆಯ ವಿಚಾರವಾಗಿ ಸಾಕಷ್ಟು ಪ್ರಶಂಸೆಗಳು ಕೇಳಿ ಬರುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ