ರಸ್ತೆ ಕಾಮಗಾರಿ ಕಳಪೆ: ಅಧಿಕಾರಿಗಳು, ಗುತ್ತಿಗೆದಾರನಿಗೆ ಶಾಸಕ ಹೆಚ್​.ಕೆ.ಸುರೇಶ್ ಕ್ಲಾಸ್​​

Edited By:

Updated on: Nov 26, 2026 | 10:49 AM

ಬೇಲೂರು ತಾಲೂಕಿನ ಸನ್ಯಾಸಿ ಹಳ್ಳಿಯಲ್ಲಿ 2.15 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿ ಕಳಪೆಯಾದ ಹಿನ್ನೆಲೆ ಶಾಸಕ ಹೆಚ್.ಕೆ. ಸುರೇಶ್ ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳು ಹಾಗೂ ಗುತ್ತಿಗೆದಾರನನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಗುಣಮಟ್ಟದ ಕಾಮಗಾರಿ ನಡೆಸುವಂತೆ ಶಾಸಕರು ಖಡಕ್​​ ಸೂಚನೆ ನೀಡಿದ್ದಾರೆ.

ಹಾಸನ, ನವೆಂಬರ್​​ 26: ಬೇಲೂರು ತಾಲೂಕಿನ ಸನ್ಯಾಸಿ ಹಳ್ಳಿಯಲ್ಲಿ ನಡೆದಿದ್ದ ರಸ್ತೆ ಕಾಮಗಾರಿ ಕಳಪೆ ಆರೋಪ ಹಿನ್ನೆಲೆ ಅಧಿಕಾರಿಗಳು ಹಾಗೂ ಗುತ್ತಿಗೆದಾರನನ್ನು ಶಾಸಕ ಹೆಚ್​.ಕೆ.ಸುರೇಶ್ ತರಾಟೆಗೆ ಪಡೆದಿದ್ದಾರೆ. ಕಾಮಗಾರಿ ನಡೆದ ಕೆಲವೇ ದಿನಗಳಲ್ಲಿ ರಸ್ತೆ ಹಾಳಾದ ಹಿನ್ನೆಲೆ ಪರಿಶೀಲನೆ ವೇಳೆ ಕಳಪೆ ಕಾಮಗಾರಿ ಆಗಿರೋದು ದೃಢ ಹಿನ್ನೆಲೆ ಶಾಸಕರು ಕ್ಲಾಸ್​​ ತೆಗೆದುಕೊಂಡಿದ್ದಾರೆ. ಬೇಲೂರು-ಬಿಕ್ಕೋಡು ರಸ್ತೆಯನ್ನು 2.15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಗುಣಮಟ್ಟದ ಕಾಮಗಾರಿ ನಡೆಸುವಂತೆ ಶಾಸಕ ಹೆಚ್.ಕೆ. ಸುರೇಶ್ ಸೂಚಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More