ಪೌರ ಕಾರ್ಮಿಕರ ದಿನಾಚರಣೆ‌: ಭರ್ಜರಿ ಸ್ಟೆಪ್​ ಹಾಕಿದ ಶಾಸಕ ಎಚ್ ಸಿ ಬಾಲಕೃಷ್ಣ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By: ಕಿರಣ್ ಹನುಮಂತ್​ ಮಾದಾರ್

Updated on: Oct 13, 2023 | 3:59 PM

ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ ಅವರು ಇಂದು ಬಿಡದಿಯಲ್ಲಿ ಪೌರ ಕಾರ್ಮಿಕರ ದಿನಾಚರಣೆ‌ಯಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಗಾಗಲ್‌ ಹಾಕಿ ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ, ಮತದಲ್ಲಿ ಮೇಲ್ಯಾವುದೋ ಎಂಬ ಹಾಡಿನ ತಾಳಕ್ಕೆ ಪೌರ ಕಾರ್ಮಿಕರ ಜೊತೆ ಕುಣಿದಿದ್ದಾರೆ.

ರಾಮನಗರ, ಅ.13: ನಿನ್ನೆ(ಅ.12)ಯಷ್ಟೇ ಕಾಂಗ್ರೆಸ್​ಗೆ​ ಮತ ಹಾಕದಿದ್ದರೆ, ಅಭಿವೃದ್ದಿ ಮಾಡಲ್ಲ. ವೋಟ್ ಹಾಕದೇ ಇರುವವರ ಬಗ್ಗೆ ಆಲೋಚನೆ ಮಾಡುತ್ತೇವೆ ಎಂಬ ಹೇಳಿಕೆಯನ್ನು ನೀಡುವುದರ ಮುಖಾಂತರ ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ(HC Balakrishna) ಅವರು ಚರ್ಚೆಗೆ ಗ್ರಾಸವಾಗಿದ್ದರು. ಬಳಿಕ ತಾವು ನೀಡಿದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಬಿಡದಿಯಲ್ಲಿ ಪೌರ ಕಾರ್ಮಿಕರ ದಿನಾಚರಣೆ‌ಯಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಗಾಗಲ್‌ ಹಾಕಿ ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ, ಮತದಲ್ಲಿ ಮೇಲ್ಯಾವುದೋ ಎಂಬ ಹಾಡಿನ ತಾಳಕ್ಕೆ ಪೌರ ಕಾರ್ಮಿಕರ ಜೊತೆ ಕುಣಿದಿದ್ದಾರೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್ ಆಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Oct 13, 2023 03:58 PM
Loading...
Unable to load recommendations.
Follow Us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ