ಸ್ವಪಕ್ಷೀಯರ ವಿರೋಧಕ್ಕೂ ಡೋಂಟ್ಕೇರ್: ಬಜೆಟ್ ಕುರಿತ ಹೇಳಿಕೆ ಸಮರ್ಥಿಸಿಕೊಂಡ ಇಕ್ಬಾಲ್ ಹುಸೇನ್
ಎಂಎಲ್‌ಎ ಇಕ್ಬಾಲ್ ಹುಸೇನ್, ಬಜೆಟ್ ಅಸಮಾಧಾನದ ಕುರಿತು ತಾವು ನೀಡಿದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಜನಪ್ರತಿನಿಧಿಯಾಗಿ ಜನರ ಹಿತಕ್ಕಾಗಿ ಮಾತನಾಡುವುದು ನನ್ನ ಕರ್ತವ್ಯ. ತಮ್ಮ ರಾಮನಗರ ಕ್ಷೇತ್ರದ ಕೆರೆ ಸಮಸ್ಯೆಗೆ ಮುಖ್ಯಮಂತ್ರಿಗಳು ಹತ್ತು ಬಾರಿ ಮನವಿ ಮಾಡಿದರೂ ಸ್ಪಂದಿಸಿಲ್ಲ. ಕ್ಷೇತ್ರದ ಬಗ್ಗೆ ಮಾತನಾಡಿದ್ದರಲ್ಲಿ ತಪ್ಪೇನಿಲ್ಲ ಎಂದು ಅವರು ಮತ್ತೆ ಪ್ರಶ್ನಿಸಿದ್ದಾರೆ.
ಬೆಂಗಳೂರು, ಮಾರ್ಚ್ 13: ಕರ್ನಾಟಕ ಬಜೆಟ್ ಕುರಿತು ತಮ್ಮ ಹೇಳಿಕೆಗೆ ಸ್ವಪಕ್ಷ ನಾಯಕರ ಆಕ್ರೋಶದ ನಡುವೆಯೂ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಾವು ಆಡಿದ್ದ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಬಜೆಟ್ ಸಮಾಧಾನ ತಂದಿಲ್ಲ ಮತ್ತು ತಮ್ಮ ನಂಬಿಕೆ ಹುಸಿಯಾಗಿದೆ ಎಂದು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ. ನಾನು ಐಎಎಸ್ ಅಥವಾ ಕೆಎಎಸ್ ಅಧಿಕಾರಿ ಅಲ್ಲ. ಬದಲಿಗೆ ಜನರ ಮತದಿಂದ ಆಯ್ಕೆಯಾದ ಜನಪ್ರತಿನಿಧಿ. ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನನ್ನ ಕರ್ತವ್ಯವಾಗಿದೆ. ನನ್ನ ಕ್ಷೇತ್ರವಾದ ರಾಮನಗರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಹೀಗಿರುವಾಗ ತಮ್ಮ ಕ್ಷೇತ್ರದ ಜನರ ಪರವಾಗಿ ಮಾತನಾಡಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
