ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ ಇಕ್ಬಾಲ್ ಹುಸೇನ್
ಶಾಸಕ ಇಕ್ಬಾಲ್ ಹುಸೇನ್ ಡಿಕೆ ಶಿವಕುಮಾರ್ ಸಿಎಂ ಆಗುವ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಧ್ಯಾನದಲ್ಲಿರುವ ಗುರುಗಳು ಎದ್ದ ಕೂಡಲೇ ಡಿಕೆಶಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಅಂತಿಮ ದಿನಾಂಕ ನೀಡಲಿದ್ದಾರೆ. ಈ ಭವಿಷ್ಯ ನಿಜವಾಗದಿದ್ದರೆ ತಮ್ಮ ರಾಜಕೀಯ ವೃತ್ತಿ ಬೇಡ ಎಂದು ಇಕ್ಬಾಲ್ ಸವಾಲು ಹಾಕಿದ್ದಾರೆ.
ರಾಮನಗರ, ಫೆಬ್ರವರಿ 28: ಗುರುಗಳು ಧ್ಯಾನದಿಂದ ಎದ್ದಿಲ್ಲ, ಎದ್ದ ತಕ್ಷಣ ಡೇಟ್ ಹೇಳುತ್ತಾರೆ. ಅವರು ಕೊಟ್ಟ ದಿನಾಂಕದೊಳಗೆ ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬೆಜ್ಜರಹಳ್ಳಿಕಟ್ಟೆ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್, ನಾನು ನಿಜವಾಗಿಯೂ ಹೇಳುತ್ತಿದ್ದೇನೆ, ನಾನು ಸುಳ್ಳು ಹೇಳುತ್ತಿಲ್ಲ. ಗುರುಗಳು ಧ್ಯಾನದಿಂದ ಎದ್ದ ತಕ್ಷಣ ಒಂದು ಡೇಟ್ ಕೊಡುತ್ತಾರೆ. ಆ ದಿನಾಂಕವೇ ಅಂತಿಮವಾಗಿರುತ್ತದೆ. ಗುರುಗಳು ಹೇಳಿದಂತೆ ಆಗಿಲ್ಲ ಅಂದರೆ ನನಗೆ ರಾಜಕಾರಣ ಬೇಡ ಎಂದಿದ್ದಾರೆ. ಆ ಮೂಲಕ ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಇಕ್ಬಾಲ್ ಹುಸೇನ್ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

