Janardan Reddy BJP Join Live: ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿ
ಕೆಆರ್‌ಪಿಪಿ ಪಕ್ಷ ಸಂಸ್ಥಾಪಕ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಇಂದು (ಮಾರ್ಚ್.25) ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಯ ಎಲ್ಲ ಬೆಂಬಲಿಗರ ಜೊತೆ ಜನಾರ್ದನ ರೆಡ್ಡಿ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಕೆಆರ್‌ಪಿಪಿ ಪಕ್ಷ ಸಂಸ್ಥಾಪಕ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhan Reddy) ಅವರು ಇಂದು (ಮಾರ್ಚ್. 25) ಬಿ.ಎಸ್.ಯಡಿಯೂರಪ್ಪ, ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಜನಾರ್ದನ ರೆಡ್ಡಿ ಅವರಿಗೆ ಪಕ್ಷದ ಬಾವುಟ ನೀಡಿ ಬಿವೈ ವಿಜಯೇಂದ್ರ ಸ್ವಾಗತಿಸಿದರು. ಬಿಜೆಪಿಯಲ್ಲಿ ಕೆಆರ್‌ಪಿಪಿ ಪಕ್ಷವನ್ನೂ ವಿಲೀನಗೊಳಿಸಿದ್ದಾರೆ. ನಿನ್ನೆ (ಮಾ.24) ರಂದು ರಾಜ್ಯ ಬಿಜೆಪಿ (BJP) ನಾಯಕರೊಂದಿಗೆ ನಡೆದ ಸಭೆಯಲ್ಲಿ ಬಿಜೆಪಿಗೆ ಸೇರಲು ಜನಾರ್ದನ ರೆಡ್ಡಿ ಒಪ್ಪಿಕೊಂಡಿದ್ದರು. ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಯ ಎಲ್ಲ ಬೆಂಬಲಿಗರ ಜೊತೆ ಜನಾರ್ದನ ರೆಡ್ಡಿ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Mar 25, 2024 10:21 AM