ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್: ಶಾಸಕ ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ವಾಲ್ಮೀಕಿ ಜಯಂತಿ ಪೋಸ್ಟರ್ ವಿವಾದ ತಾರಕಕ್ಕೇರಿದ್ದು, ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಮುಂದೆ ಲಾರಾ ಬ್ರದರ್ಸ್ ನೇತೃತ್ವದಲ್ಲಿ ಗುಂಪೊಂದು ಜಮಾಯಿಸಿ ಗಲಾಟೆ ಸೃಷ್ಟಿಸಿದೆ. ಈ ಘಟನೆ ಕುರಿತು ಜನಾರ್ದನ ರೆಡ್ಡಿ ಪ್ರತಿಕ್ರಿಯಿಸಿದ್ದು, ತಮ್ಮ ಭದ್ರತಾ ಸಿಬ್ಬಂದಿ ಗುಂಪನ್ನು ಚದುರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಬಳ್ಳಾರಿ, ಜನವರಿ 01: ಬಳ್ಳಾರಿ ನಗರದಲ್ಲಿರುವ ಶಾಸಕ ಗಾಲಿ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಖಾಸಗಿ ಗನ್‌ಮ್ಯಾನ್‌ಗಳಿಂದ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಈ ಘಟನೆ ಬಗ್ಗೆ ಶಾಸಕ ಜನಾರ್ದನ ರೆಡ್ಡಿ ಮಾತನಾಡಿದ್ದು, ಬೆಂಗಳೂರಿನಿಂದ ಬಂದು ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಚಲಪತಿ ಅವರೊಂದಿಗೆ ಚರ್ಚಿಸಿ ವಾಪಸ್ ಬರುವ ಸಂದರ್ಭದಲ್ಲಿ ಈ ರೀತಿ ಆಗಿದೆ ಎಂದು ಕರೆ ಬಂತು. ಮನೆ ಮುಂದೆ ಬಂದು ಗಲಾಟೆ ಮಾಡುವುದೇ ಅವರ ಮುಖ್ಯ ಉದ್ದೇಶವಾಗಿತ್ತು ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
