ಬಾದಾಮಿ: ಪಿಡಿಒ ವಿರುದ್ಧ ಶಾಸಕ ಜೆಟಿ ಪಾಟೀಲ್ ಗರಂ, ಸಾರ್ವಜನಿಕರ ಎದುರೇ ಕ್ಲಾಸ್

Edited By:

Updated on: Jan 29, 2025 | 12:58 PM

ಜನರ ಅಳಲು ಕೇಳಿದ ಬೀಳಗಿ ಶಾಸಕ ಜೆಟಿ ಪಾಟೀಲ್ ಸಾರ್ವಜನಿಕರ ಎದುರೇ ಫಕೀರ್ ಬೂದಿಹಾಳ ಗ್ರಾಮದಲ್ಲಿ ಪಿಡಿಒ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜನರ ಪರ ಕೆಲಸ ಮಾಡದಿದ್ದರೆ ಅಮಾನತು ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ನಾಳೆಯೇ ಪಿಡಿಒಗಳ ಸಭೆ ಕರೆಯುವಂತೆಯೂ ಸೂಚಿಸಿದರು.

ಬೆಳಗಾವಿ, ಜನವರಿ 29: ಸಾರ್ವಜನಿಕರ ಸಮ್ಮುಖದಲ್ಲೇ ಗ್ರಾಮ ಪಂಚಾಯತ್ ಪಿಡಿಒ ರನ್ನು ಶಾಸಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಫಕೀರ್ ಬೂದಿಹಾಳ ಗ್ರಾಮದಲ್ಲಿ ಪಿಡಿಒ ಭಾರತಿ ಬದ್ನೂರ್​​ ವಿರುದ್ಧ ಬೀಳಗಿ ಶಾಸಕ ಜೆಟಿ ಪಾಟೀಲ್ ಗರಂ ಆದರು. ಸಿಇಒಗೆ ಕರೆ ಮಾಡಿ ನಾಳೆಯೇ ಪಿಡಿಒಗಳ ಸಭೆ ಮಾಡಲು ಸೂಚನೆ ನೀಡಿದರು.

ಪಿಡಿಒ ಕಾರ್ಯವೈಖರಿಗೆ ಬೇಸತ್ತು ಜನರು ಶಾಸಕ ಜೆ.ಟಿ.ಪಾಟೀಲ್ ಮುಂದೆ ಅಳಲು ತೋಡಿಕೊಂಡರು. ಇದೇ ವೇಳೆ ಗರಂ ಆದ ಶಾಸಕರು, ಪಿಡಿಒಗಳು ದೊಡ್ಡ ಭೂತ ಆಗಿದ್ದೀರಿ. ನರೇಗಾ, ಜನರ ಕೆಲಸ ಮಾಡದಿದ್ದರೆ ಅಮಾನತು ಮಾಡುತ್ತೇನೆ. ಕೆಲಸ ಮಾಡದಿದ್ದರೆ ಚಟ್ಟನೆ ಬೆಳಗಿಬಿಡ್ತೇನೆ ಮತ್ತೆ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More