ಹೊನ್ನಾಳಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ನಡೆಯುವ ಮೊದಲು ಶಾಸಕ ಎಮ್ ಪಿ ರೇಣುಕಾಚಾರ್ಯ ಕುಣಿದಿದ್ದೇ ಕುಣಿದಿದ್ದು!

ಅರುಣ್​ ಕುಮಾರ್​ ಬೆಳ್ಳಿ

Updated on: Mar 17, 2023 | 5:19 PM

ಕಾರ್ಯಕ್ರಮಕ್ಕೆ ಮೊದಲು ನಡೆಯುತ್ತಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ವೇದಿಕೆ ಹತ್ತಿದ ರೇಣುಕಾಚಾರ್ಯ ಸುಂಟರಗಾಳಿ ಚಿತ್ರದ ಹಾಡಿಗೆ ತಾಳಬದ್ಧವಾಗಿ ಕುಣಿದರು.

ದಾವಣಗೆರೆ: ಹೊನ್ನಾಳಿಯ ಬಿಜೆಪಿ ಶಾಸಕ ಎಮ್​ಪಿ ರೇಣುಕಾಚಾರ್ಯ (MP Renukacharya) ಅವರಿಗೆ ಡ್ಯಾನ್ಸ್ ಮಾಡುವುದು ಹೊಸದೇನೋ ಅಲ್ಲ. ಜಾತ್ರೆಯಲ್ಲಿ, ಸಂಭ್ರಮಾಚರಣೆಗಳಲ್ಲಿ ಅವರು ಆಗಾಗ ಕುಣಿಯುತ್ತಿರುತ್ತಾರೆ. ಇಂದು ಅವರ ಕ್ಷೇತ್ರ ಹೊನ್ನಾಳಿಯಲ್ಲಿ 1993 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ (development works) ಶಂಕುಸ್ಥಾಪನೆ ಮತ್ತು ಉದ್ಘಾಟನಾ (inauguration) ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮೊದಲು ನಡೆಯುತ್ತಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ವೇದಿಕೆ ಹತ್ತಿದ ರೇಣುಕಾಚಾರ್ಯ ಸುಂಟರಗಾಳಿ ಚಿತ್ರದ ಹಾಡಿಗೆ ತಾಳಬದ್ಧವಾಗಿ ಕುಣಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.