ಶಾಸಕ ಮುನಿರತ್ನಗೆ ಮತ್ತೊಂದು ಕಾನೂನು ಸಂಕಷ್ಟ: ಸಂತ್ರಸ್ತೆಯ ಗುರುತು ಬಹಿರಂಗ, ಬೆದರಿಕೆ ಆರೋಪ

Updated on: Nov 26, 2026 | 7:35 AM

ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನ ಯಶವಂತಪುರ ಠಾಣೆಯಲ್ಲಿ ಮತ್ತೊಂದು FIR ದಾಖಲಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಆರೋಪ ಅವರ ಮೇಲಿದೆ. ಈ ಹಿಂದೆ ಕಗ್ಗಲಿಪುರ ಠಾಣೆಗೆ ದೂರನ್ನ ನೀಡಿದ್ದ ಸಂತ್ರಸ್ತೆ, ಮುನಿರತ್ನ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕುಟುಂಬದ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು, ನ.26: ಆರ್.ಆರ್.ನಗರ ಶಾಸಕ ಮುನಿರತ್ನ ಅವರ ವಿರುದ್ಧ ಮತ್ತೊಂದು ಎಫ್ಐಆರ್​ ದಾಖಲಾಗಿದೆ. ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಈ FIR ದಾಖಲಾಗಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಗಂಭೀರ ಆರೋಪ ಅವರ ಮೇಲಿದೆ. ಸಂತ್ರಸ್ತೆಯು ಈ ಹಿಂದೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆ ದೂರಿನ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಆ ಸಂತ್ರಸ್ತೆಯ ಗುರುತು ತಿಳಿಯುವಂತೆ ಬಹಿರಂಗವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಸಂತ್ರಸ್ತೆಯ ಕುಟುಂಬದ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿ, ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದೂ ದೂರಿನಲ್ಲಿ ನಮೂದಿಸಲಾಗಿದೆ. ಈ ಸಂಬಂಧ ಬಿಎನ್ಎಸ್ ಸೆಕ್ಷನ್ 72 ಮತ್ತು 351 ಕ್ಲಾಸ್ ಎರಡರ ಅಡಿಯಲ್ಲಿ ಯಶವಂತಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹೊಸ FIR ನಿಂದ ಶಾಸಕ ಮುನಿರತ್ನ ಅವರು ಮತ್ತಷ್ಟು ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾರ್ವಜನಿಕವಾಗಿ ಸಂತ್ರಸ್ತರ ಗುರುತು ಬಹಿರಂಗಪಡಿಸುವುದು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಈ ಪ್ರಕರಣದ ತನಿಖೆ ಮುಂದುವರಿದಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 26, 2026 07:34 AM
Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More