AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶೋತ್ಸವದ ವೇಳೆ ಅವಾಚ್ಯ ಪದ ಬಳಕೆ ಆರೋಪ: ಶಾಸಕ ಮುನಿರತ್ನ ಮನೆ ಬಳಿ ಹೈಡ್ರಾಮಾ

ಗಣೇಶೋತ್ಸವದ ವೇಳೆ ಅವಾಚ್ಯ ಪದ ಬಳಕೆ ಆರೋಪ: ಶಾಸಕ ಮುನಿರತ್ನ ಮನೆ ಬಳಿ ಹೈಡ್ರಾಮಾ

ಪ್ರಸನ್ನ ಗಾಂವ್ಕರ್​
| Edited By: |

Updated on: Sep 28, 2026 | 12:55 PM

Share

ಬೆಂಗಳೂರಿನಲ್ಲಿ ಗಣೇಶೋತ್ಸವದ ಅನ್ನದಾನ ಕಾರ್ಯಕ್ರಮದ ವೇಳೆ ಆರ್​​.ಆರ್​​. ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರು ಅವಾಚ್ಯ ಪದ ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಮಲ್ಲೇಶ್ವರಂನಲ್ಲಿರುವ ಮುನಿರತ್ನ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರನ್ನು ನಿಯೋಜಿಸಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​​ 28: ಮಲ್ಲೇಶ್ವರಂನಲ್ಲಿ ನಡೆದ ಗಣೇಶೋತ್ಸವದ ಅನ್ನದಾನದ ವೇಳೆ ಅವಾಚ್ಯ ಶಬ್ದ ಬಳಕೆ ಆರೋಪ ಸಂಬಂಧ ಆರ್.ಆರ್​.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಮುನಿರತ್ನ ನಿವಾಸದ ಎದುರು ಸ್ಥಳೀಯರು ಧರಣಿ ನಡೆಸಿದ್ದು, ಶಾಸಕರ ಕಾರು ಅಡ್ಡ ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಈ ಹಿನ್ನೆಲೆ ಮುನಿರತ್ನ ನಿವಾಸಕ್ಕೆ ಪೊಲೀಸ್​​ ಭದ್ರತೆ ನೀಡಲಾಗಿದ್ದು, ಸ್ಥಳದಲ್ಲೇ ಇರುವ ಒಂದು ಕೆಎಸ್ಆರ್​​ಪಿ ತುಕಡಿ, 25ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಸದ್ಯ ಪರಿಸ್ಥಿತಿಯನ್ನ ಪೊಲೀಸ್​ ಸಿಬ್ಬಂದಿ ತಿಳಿಗೊಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More