ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿಯಾದ ಶಾಸಕ ಮುನಿರತ್ನ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿಯಾದ ಶಾಸಕ ಮುನಿರತ್ನ

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 03, 2025 | 7:21 PM

ಸಾಯಂಕಾಲ 7 ಗಂಟೆಗೆ ನವದೆಹಲಿಗೆ ತೆರಳುವ ಮೊದಲು ಸ್ವಲ್ಪ ಹೊತ್ತು ವಿಶ್ರಮಿಸಿಕೊಳ್ಳುವ ಉದ್ದೇಶದಿಂದ ನಡ್ಡಾ ಅತಿಥಿ ಗೃಹಕ್ಕೆ ಆಗಮಿಸಿದ್ದರು. ನಿನ್ನೆ ರಾತ್ರಿಯೇ ನಗರಕ್ಕೆ ಆಗಮಿಸಿದ ನಡ್ಡಾ ಅವರು ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಇತರ ಕೆಲ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿದರು.

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರು ಇಂದು ಕುಮಾರ ಕೃಪಾ ಅತಿಥಿ ಗೃಹದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸರ್ಕಾರದಲ್ಲಿ ಅರೋಗ್ಯ ಸಚಿವರೂ ಆಗಿರುವ ಜೆಪಿ ನಡ್ಡಾ ಅವರನ್ನು ಭೇಟಿಯಾದರು. ಮುನಿರತ್ನಗೆ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಪ್ರತ್ಯೇಕವಾಗಿ ಮಾತಾಡುವ ಅವಕಾಶ ಸಿಕ್ಕಿತೋ ಇಲ್ಲವೋ ಗೊತ್ತಾಗಿಲ್ಲ. ಕಳೆದ ಕೆಲ ವಾರಗಳಿಂದ ಸುದ್ದಿಯಲ್ಲಿರುವ ಮುನಿರತ್ನ ಅವರೊಂದಿಗೆ ಸಿದ್ದು ಪಾಟೀಲ್, ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ ಮತ್ತು ಇನ್ನೂ ಕೆಲ ಮುಖಂಡರಿದ್ದರು. ನಡ್ಡಾ ಅವರೊಂದಿಗೆ ಎಮ್ಮೆಲ್ಸಿ ರವಿ ಕುಮಾರ್ ಇದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಂಗಳೂರಿಗೆ ಬಂದ ಜೆಪಿ ನಡ್ಡಾ: ಏರ್​ಪೋರ್ಟ್​ನಲ್ಲೇ ಬಿಜೆಪಿ ನಾಯಕರ ಜತೆ ಸಭೆ