ಕೋಲಾರ: ಮಹಿಳಾ ಕಾರ್ಯಕರ್ತರ ಜೊತೆ ಕುಣಿದು ಕುಪ್ಪಳಿಸಿದ ಶಾಸಕ ನಾರಾಯಣಸ್ವಾಮಿ, ವಿಡಿಯೋ ನೋಡಿ
ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕೈಗೊಂಡ ಪಾದಯಾತ್ರೆ ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ತಾಲ್ಲೂಕು ಕಚೇರಿ ಎದುರು ರಸ್ತೆಯಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ಮಹಿಳಾ ಕಾರ್ಯಕರ್ತರ ಜೊತೆ ಡ್ಯಾನ್ಸ್ ಮಾಡಿ ಎಂಜಾಯ್ ಮಾಡಿದ್ದಾರೆ.
ಕೋಲಾರ, ಆಗಸ್ಟ್.06: ಕೋಲಾರ ಜಿಲ್ಲೆ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ (SN Narayanaswamy) ಅವರು ಮಹಿಳಾ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕೈಗೊಂಡ ಪಾದಯಾತ್ರೆ ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ತಾಲ್ಲೂಕು ಕಚೇರಿ ಎದುರು ರಸ್ತೆಯಲ್ಲಿ ಶಾಸಕ ಡ್ಯಾನ್ಸ್ ಮಾಡಿ ಎಂಜಾಯ್ ಮಾಡಿದ್ದಾರೆ.
ಶಾಸಕ ನಾರಾಯಣಸ್ವಾಮಿ ಜೊತೆಗೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಕೂಡ ಭರ್ಜರಿ ಸ್ಟೆಪ್ಸ್ ಹಾಕಿ ಸಂಭ್ರಮಿಸಿದ್ದಾರೆ. ತಮಟೆ ಸದ್ದಿಗೆ ಹೆಜ್ಜೆ ಹಾಕಿ ನರೇಂದ್ರ ಮೋದಿ ವಿರುದ್ದ ಘೋಷಣೆ ಕೂಗಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಿಂದ ತಾಲೂಕು ಕಚೇರಿಯವರೆಗೂ ಪ್ರತಿಭಟನಾ ರ್ಯಾಲಿ ಸಾಗಿತು. ಬಿಜೆಪಿ ಸರ್ಕಾರದ ವೇಳೆ ನಡೆದಿರುವ ಹಗರಣದ ಫೋಟೋಗಳನ್ನು ಹಿಡಿದು ಮೋದಿ ಹಾಗೂ ರಾಜ್ಯಪಾಲರ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು, ಮಹಿಳೆಯರು ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ