ಛಲವಾದಿ ನಾರಾಯಣಸ್ವಾಮಿ ಅಪ್ರಬುದ್ಧ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಿಡಿ
ಬಿಜೆಪಿಯವರು ಲಿಂಗಾಯತರನ್ನ ಟಾರ್ಗೆಟ್ ಮಾಡುತ್ತಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಅವರೇ ಯಡಿಯೂರಪ್ಪ ಅವರನ್ನ ಸಿಎಂ ಸ್ಥಾನದಿಂದ ಇಳಿಸುವಾಗ, ಯತ್ನಾಳ್ರನ್ನು ಪಕ್ಷದಿಂದ ಉಚ್ಛಾಟಿಸುವಾಗ ನೀವು ಎಲ್ಲಿ ಹೋಗಿದ್ರಿ? ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರಶ್ನಿಸಿದ್ದಾರೆ. ಸುದೀಪ್ರನ್ನು ಟಾರ್ಗೆಟ್ ಮಾಡಲಾಗ್ತಿದೆ ಎಂಬ ಪರಿಷತ್ ವಿಪಕ್ಷ ನಾಯಕರ ಹೇಳಿಕೆಗೆ ಚಿಕ್ಕಬಳ್ಳಾಪುರ ಶಾಸಕರು ಈ ರೀತಿ ಕೌಂಟರ್ ಕೊಟ್ಟಿದ್ದಾರೆ.
ಬೆಂಗಳೂರು, ಅಕ್ಟೋಬರ್ 09: ಸುದೀಪ್ ಅವರನ್ನ ಟಾರ್ಗೆಟ್ ಮಅಡಲಾಗಿದೆ ಎಂಬ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ತಿರುಗೇಟು ನೀಡಿದ್ದಾರೆ. ಅಪ್ರಬುದ್ಧ ಛಲವಾದಿ ನಾರಾಯಣಸ್ವಾಮಿ ಅವರೇ, ಸುದೀಪ್ ಅವರಿಗೂ ಸರ್ಕಾರಕ್ಕೂ ಏನು ಸಂಬಂಧ? ಕಾನೂನು ಎಲ್ಲರಿಗೂ ಒಂದೇ ಅಲ್ವಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಸುದೀಪ್ ಅವರನ್ನ ನಿಮಗಿಂತ ಜಾಸ್ತಿ ನಾವು ಪ್ರೀತಿಸುತ್ತೇವೆ, ಅಭಿಮಾನಿಸುತ್ತೇವೆ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
