ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ; ಹೊಸಬರಿಗೆ ಅವಕಾಶಕ್ಕೆ ಆಗ್ರಹ

Edited By:

Updated on: Apr 12, 2026 | 10:38 AM

ಶಾಸಕ ರವಿಕುಮಾರ್ ಗಣಿಗ ಅವರು ಸಚಿವ ಸಂಪುಟ ಪುನರ್‌ರಚನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಾಲಿ ಇರುವ ಕೆಲವು ಸಚಿವರನ್ನು ಬದಲಾಯಿಸಿ, ಹೊಸಬರಿಗೆ ಅವಕಾಶ ನೀಡುವಂತೆ ಅವರು ಆಗ್ರಹಿಸಿದ್ದಾರೆ. ಹೊಸಬರಿಗೆ ಮಂತ್ರಿಗಿರಿ ನೀಡುವಂತೆ ತಾವು ಸೇರಿದಂತೆ 38 ಶಾಸಕರು ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ವೈಯಕ್ತಿಕವಾಗಿ ತಮಗೆ ಸಚಿವ ಸ್ಥಾನ ಬೇಡ ಎಂದು ಗಣಿಗ ಸ್ಪಷ್ಟಪಡಿಸಿದ್ದಾರೆ.

ಮಂಡ್ಯ, ಏಪ್ರಿಲ್​​ 12: ಸಚಿವ ಸಂಪುಟ ಪುನರ್‌ರಚನೆ ಕುರಿತು ಶಾಸಕ ರವಿಕುಮಾರ್ ಗಣಿಗ ಮಂಡ್ಯದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ. ಅವರೆಲ್ಲರಿಗೂ ಸಚಿವ ಸ್ಥಾನ ಸಿಕ್ಕು ರಾಜ್ಯಕ್ಕೆ ಸೇವೆ ಸಲ್ಲಿಸಲಿ. ಈ ಸಂಬಂಧ ತಾವು ಸೇರಿದಂತೆ 38 ಶಾಸಕರು ಪತ್ರ ಬರೆದಿದ್ದು, ಐದು ಮಂದಿ ಹೊಸಬರಿಗೆ ಮಂತ್ರಿಗಿರಿ ನೀಡುವಂತೆ ಕೋರಿದ್ದೇವೆ. ಹೊಸದಾಗಿ ಶಾಸಕರಾದವರಿಗೆ ಸಚಿವ ಸ್ಥಾನ ಸಿಗಬೇಕು ಎಂಬ ತಮ್ಮ ಆಗ್ರಹದಲ್ಲಿ ಯಾವುದೇ ಬದಲಾವಣೆ ಇಲ್ಲ. ವೈಯಕ್ತಿಕವಾಗಿ ತನಗೆ ಸಚಿವ ಸ್ಥಾನ ಬೇಡ ಎಂದು ರವಿಕುಮಾರ್​​ ಗಣಿಗ ತಿಳಿಸಿದ್ದಾರೆ. ಹಾಲಿ ಇರುವ ಕೆಲವು ಸಚಿವರು ಸಮರ್ಥವಾಗಿ ಕಾರ್ಯನಿರ್ವಹಿಸದಿರುವುದು ಮತ್ತು ಜನರಿಗೆ ಲಭ್ಯವಿಲ್ಲದಿರುವುದು ಕೆಲಸಗಳಿಗೆ ಅಡ್ಡಿಯಾಗುತ್ತಿದೆ. ಆದ್ದರಿಂದ ಇಂತಹ ಸಚಿವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡುವುದು ಉತ್ತಮ. ಹೀಗಿದ್ದರೂ ಈ ನಿರ್ಧಾರ ಮುಖ್ಯಮಂತ್ರಿಗಳು ಮತ್ತು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 12, 2026 10:37 AM
Follow Us
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More