ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಹಾಡಿಗೆ ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ಕೋಲಾರ ಜಿಲ್ಲೆಯ ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ದಿ ಮಂಜುನಾಥ್ ಅವರು ಕಾಲೇಜೊಂದರ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ವಿದ್ಯಾರ್ಥಿಗಳೊಂದಿಗೆ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಕಾಲೇಜು ವಿದ್ಯಾರ್ಥಿಗಳೊಂದಿಗೆ ಸೇರಿ, ಹಾಡಿನುದ್ದಕ್ಕೂ ಕುಣಿದು ಕುಪ್ಪಳಿಸಿದ್ದಾರೆ. ಶಾಸಕರ ಡ್ಯಾನ್ಸ್ಗೆ ಇತರ ವಿದ್ಯಾರ್ಥಿಗಳು ಶಿಳ್ಳೆ, ಚಪ್ಪಾಳೆ ಹೊಡೆದು ಸಂಭ್ರಮಿಸಿದರು.
ಕೋಲಾರ, ಜುಲೈ.03: ವೇದಿಕೆ ಮೇಲೆ ಕಾಲೇಜು ವಿದ್ಯಾರ್ಥಿಗಳೊಂದಿಗೆ ಶಾಸಕ ಸಮೃದ್ದಿ ಮಂಜುನಾಥ್ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ದಿ ಮಂಜುನಾಥ್ ಅವರು ಮುಳಬಾಗಿಲು ನಗರದ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಡಾ ರಾಜ್ ಕುಮಾರ್ ಅಭಿನಯದ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಕಾಲೇಜು ವಿದ್ಯಾರ್ಥಿಗಳೊಂದಿಗೆ ಸೇರಿ, ಹಾಡಿನುದ್ದಕ್ಕೂ ಕುಣಿದು ಕುಪ್ಪಳಿಸಿದ್ದಾರೆ. ಶಾಸಕರ ಡ್ಯಾನ್ಸ್ಗೆ ಇತರ ವಿದ್ಯಾರ್ಥಿಗಳು ಶಿಳ್ಳೆ, ಚಪ್ಪಾಳೆ ಹೊಡೆದು ಸಂಭ್ರಮಿಸಿದರು.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Published on: Jul 03, 2024 12:25 PM
Latest Videos