ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸಿಡಿದ ‘ಕೈ’ ಶಾಸಕ: ಗೃಹ ಸಚಿವರ ಬಳಿ ಅಸಮಾಧಾನ ತೋಡಿಕೊಂಡ ತನ್ವೀರ್ ಸೇಠ್
ಮುಖ್ಯಮಂತ್ರಿಗಳ ಪುತ್ರ ಯತೀಂದ್ರ ಹಸ್ತಕ್ಷೇಪದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಪೊಲೀಸ್ ಠಾಣೆ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್, ಸಚಿವ ಪರಮೇಶ್ವರ್ ಎದುರೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಆ ಮೂಲಕ ಜಾರ್ಜ್ ನಂತರ ಯತೀಂದ್ರ ಹಸ್ತಕ್ಷೇಪದ ಬಗ್ಗೆ ಮತ್ತೊಬ್ಬ ನಾಯಕ ಧ್ವನಿ ಎತ್ತಿದಂತಾಗಿದೆ.
ಮೈಸೂರು, ಫೆಬ್ರವರಿ 08: ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಕೆ.ಜೆ. ಜಾರ್ಜ್ ನಂತರ ಕಾಂಗ್ರೆಸ್ನ ಮತ್ತೊಬ್ಬ ನಾಯಕ ಅಸಮಾಧಾನ ಹೊರ ಹಾಕಿದ್ದಾರೆ. ಪೊಲೀಸ್ ಠಾಣೆ ಉದ್ಘಾಟನೆ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿ ಹೊರ ನಡೆಯಲು ಮುಂದಾದ ಪ್ರಸಂಗ ನಡೆದಿದೆ. ಈ ವೇಳೆ ಸಚಿವ ಪರಮೇಶ್ವರ್ ತನ್ವೀರ್ಸೇಠ್ ಮನವೊಲಿಕೆ ಯತ್ನ ಮಾಡಿದ್ದು, ಜೊತೆಗೆ ಶಾಸಕ ಅನಿಲ್ ಕೂಡ ಅವರನ್ನು ಸಮಾಧಾನ ಮಾಡಿದ್ದಾರೆ. ಸ್ಟೇಜ್ ಮೇಲೆ ಬಂದರೆ ಬೇರೆ ಮಾತನಾಡುತ್ತೇನೆ ಎಂದಿದ್ದ ತನ್ವೀರ್ ಸೇಠ್, ಕೊನೆಗೆ ಒಲ್ಲದ ಮನಸ್ಸಿನಿಂದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
