Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ ಕೆಂಡಾಮಂಡಲ

ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ ಕೆಂಡಾಮಂಡಲ

ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 17, 2025 | 5:54 PM

ಧಾರವಾಡದ ಹೊರವಲಯದಲ್ಲಿ ಪೊಲೀಸರ ವಿರುದ್ಧ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ತೀವ್ರ ವಾಗ್ದಾಳಿ ಮಾಡಿದ್ದಾರೆ. ಪೊಲೀಸರು ರಸ್ತೆಯಲ್ಲಿ ನಿಂತು ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ಅಕ್ರಮಗಳಿಂದಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಹುಬ್ಬಳ್ಳಿ, ಫೆಬ್ರವರಿ 17: ಪೊಲೀಸರಿಗೆ ಉದ್ಯೋಗವೇ ಇಲ್ಲ, ವಾಹನಗಳನ್ನ ಹಿಡಿಯೋದು, ದುಡ್ಡು ವಸೂಲಿ ಮಾಡೋದು ಎಂದು ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್​ ಕುಲಕರ್ಣಿ (Vinay Kulkarni) ವಾಗ್ದಾಳಿ ಮಾಡಿದ್ದಾರೆ. ಧಾರವಾಡ ಹೊರವಲಯದಲ್ಲಿ ಘಟನೆ ನಡೆದಿದ್ದು,  ಪೊಲೀಸರು ರಸ್ತೆಯಲ್ಲಿ ನಿಂತು ವಾಹನಗಳನ್ನ ಲೂಟಿ‌‌ ಮಾಡ್ತಿದ್ದಾರೆ. ಟಂಟಂಗೆ 5-10 ಸಾವಿರ ರೂ. ದಂಡ ಹಾಕುತ್ತೀರಿ ಎಂದು ಗರಂ ಆಗಿದ್ದಾರೆ. ದಾಖಲೆ ಪರಿಶೀಲಿಸಿ ಅಭ್ಯಂತರ ಇಲ್ಲ. ಆದರೆ ಎಲ್ಲ ದಾಖಲೆ ಇದ್ದರೂ ಒಂದು ಹಿಡುಕೊಂಡು ಕೂರ್ತಿರಿ. ಈ ಪೊಲೀಸರಿಂದ ವಾಹನ ಸವಾರರು ಬೇಸತ್ತು ಹೋಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.