Video: ಭೀಕರ ಬರದ ನಡುವೆಯೂ ಶಾಸಕ ವಿಶ್ವಾಸ್ ವೈದ್ಯರಿಂದ ಅದ್ಧೂರಿ ಹುಟ್ಟುಹಬ್ಬ ಆಚರಣೆ

Edited By:

Updated on: Oct 12, 2023 | 11:04 PM

ಬಿಸಿಲು ಭೂಮಿಯನ್ನೇ ಬೇಯಿಸುತ್ತಿದೆ. ಮಳೆ ಇಲ್ಲದೇ ಬೆಳೆಗಳು ನೆಲಕ್ಕಚ್ಚುತ್ತಿವೆ. ಭಿತ್ತಿದ್ದ ಬೆಳೆಯನ್ನ ರೈತರೇ ನಾಶ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬರಗಾಲ ಆವರಸಿರುವ ಇಂತಹ ಸಂದರ್ಭದಲ್ಲಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಶ್ವಾಸ್ ವೈದ್ಯರಿಂದ ಅದ್ಧೂರಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

ಬೆಳಗಾವಿ, ಅಕ್ಟೋಬರ್​​​ 12: ಬಿಸಿಲು ಭೂಮಿಯನ್ನೇ ಬೇಯಿಸುತ್ತಿದೆ. ಮಳೆ ಇಲ್ಲದೇ ಬೆಳೆಗಳು ನೆಲಕ್ಕಚ್ಚುತ್ತಿವೆ. ಭಿತ್ತಿದ್ದ ಬೆಳೆಯನ್ನ ರೈತರೇ ನಾಶ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬರಗಾಲ ಆವರಸಿರುವ ಇಂತಹ ಸಂದರ್ಭದಲ್ಲಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಶ್ವಾಸ್ ವೈದ್ಯ (Vishwas Vaidya) ರಿಂದ ಅದ್ಧೂರಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಸವದತ್ತಿ ಪಟ್ಟಣದಲ್ಲಿರುವ ಶಾಸಕರ ನಿವಾಸದಲ್ಲಿ ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ. ಆನೆ ಮೂಲಕ ಶಾಸಕ ವಿಶ್ವಾಸ್ ವೈದ್ಯಗೆ ಕಾರ್ಯಕರ್ತರು ಹಾರಹಾಕಿಸಿದ್ದಾರೆ. ಕುಂಭ ಹೊತ್ತ ಮಹಿಳೆಯರ ಮೆರವಣಿಗೆ, ಲಂಬಾಣಿ ಮಹಿಳೆಯರಿಂದ ನೃತ್ಯ ಮಾಡಲಾಗಿದೆ. ಬಳಿಕ ಎಲ್ಲ ಕಾರ್ಯಕರ್ತರಿಗೆ ಶಾಸಕ ವಿಶ್ವಾಸ್ ವೈದ್ಯ ಊಟದ ವ್ಯವಸ್ಥೆ ಮಾಡಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More