ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ 3 ತಿಂಗಳಲ್ಲೇ ಪತನವಾಗಲಿದೆ: ಭವಿಷ್ಯ ನುಡಿದ ಯತ್ನಾಳ್!
ಮೈಸೂರಿನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಈ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಇದೇ ರೀತಿ ಮುಂದುವರಿದರೆ ಮೂರು ತಿಂಗಳಲ್ಲೇ ನಿಮ್ಮ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದಾರೆ. ಭ್ರಷ್ಟಾಚಾರ ಮತ್ತು ಕುಟುಂಬ ರಾಜಕಾರಣದ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು, ಸೆಪ್ಟೆಂಬರ್ 12: ಹಿಂದೂ ವಿರೋಧಿ ನೀತಿ ಅನುಸರಿಸುವ ಸಿಎಂ ಸಿದ್ದರಾಮಯ್ಯನವರೇ (Siddaramaiah) ನಿಮ್ಮ ಸರ್ಕಾರ 2028ರವರೆಗೆ ಅಲ್ಲ 3 ತಿಂಗಳಲ್ಲೇ ಪತನವಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಕರ್ನಾಟಕದಲ್ಲಿ ಭ್ರಷ್ಟಾಚಾರ, ಕುಟುಂಬ ರಾಜಕಾರಣ ಇದೆ. ಭ್ರಷ್ಟಾಚಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ರೀತಿ ಮುಂದುವರಿದರೆ ಮೂರು ತಿಂಗಳಲ್ಲೇ ನಿಮ್ಮ ಸರ್ಕಾರ ಪತನವಾಗಲಿದೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
