ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದು ಖಚಿತ ಎಂದಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕೋರ್ ಕಮಿಟಿಯ ನಿರ್ಣಯದಂತೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೋರ್ ಕಮಿಟಿಯಲ್ಲಿ ತಮ್ಮ ಹೆಸರು ಅಂತಿಮಗೊಂಡರೆ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ವಿಜಯಪುರ, ಜನವರಿ 26: ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವುದು ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋರ್ ಕಮಿಟಿಯಲ್ಲಿ ನನ್ನ ಹೆಸರು ಅಂತಿಮವಾದರೆ ಸ್ಪರ್ಧಿಸುವೆ. ಕೋರ್ ಕಮಿಟಿಯಲ್ಲಿ ಸೂಕ್ತ ಅಭ್ಯರ್ಥಿ ಬಗ್ಗೆ ಚರ್ಚೆ ಮಾಡುತ್ತೇವೆ. ಕೋರ್ ಕಮಿಟಿ ನಿರ್ಣಯ ಮಾಡಿದವರು ಸ್ಪರ್ಧೆ ಮಾಡುತ್ತಾರೆ. ನನ್ನ ಹೆಸರು ಫೈನಲ್ ಆದರೆ ಸ್ಪರ್ಧೆ ಮಾಡ್ತೇನೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos