Loading video

ಅನುದಾನ ಸಿಕ್ಕಿಲ್ಲ ಅಂತೇನೂ ಇಲ್ಲ ಆದರೆ ಕಡಿಮೆ ಪ್ರಮಾಣದಲ್ಲಿ ಸಿಕ್ಕಿದೆ: ಬಿಕೆ ಹರಿಪ್ರಸಾದ್

|

Updated on: Nov 19, 2024 | 12:55 PM

ಕೆಲವು ಶಾಸಕರು ತಮಗೂ ಮಂತ್ರಿ ಸ್ಥಾನಬೇಕೆಂದು ಆಸೆ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸುಂಪುಟ ಪುನಾರಚನೆ ನಡೆಯುವುದು ನಿಶ್ಚಿತವೇ ಎಂದು ಕೇಳಿದ ಪ್ರಶ್ನೆಗೆ ಹರಿಪ್ರಸಾದ್ ಅವರು, ಮುಖ್ಯಮಂತ್ರಿ ಇಲ್ಲವೇ ರಾಜ್ಯಪಾಲರಿಗೆ ಕೇಳಬೇಕಾದ ಪ್ರಶ್ನೆಯನ್ನು ತನ್ನನ್ನು ಕೇಳೋದ್ಯಾಕೆ? ಅದರ ಬಗ್ಗೆ ಗೊತ್ತಿಲ್ಲ ಎಂದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಹಿರಿಯ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್, ಅಭಿವೃದ್ಧಿ ಕೆಲಸಗಳಿಗಾಗಿ ರಾಜ್ಯದ ಹಲವು ಕ್ಷೇತ್ರಗಳಿಗೆ ಅನುದಾನ ಕಡಿಮೆ ಸಿಕ್ಕಿರುವುದನ್ನು ಅಂಗೀಕರಿಸಿದರು. ಅನುದಾನ ಸಿಕ್ಕೇ ಇಲ್ಲ ಅಂತೇನೂ ಇಲ್ಲ, ಆದರೆ ಹಿಂದಿನ ಅವಧಿಗಳಿಗೆ ಹೋಲಿಸಿದರೆ ಕಡಿಮೆ ಪ್ರಮಾಣದಲ್ಲಿ ಅನುದಾನ ಸಿಕ್ಕಿದೆ, ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ವಿನಿಯೋಗಿಸಿರುವುದರಿಂದ ಅನುದಾನ ಕಮ್ಮಿಯಾಗಿದೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನವೂ ಅಭಿವೃದ್ಧಿ ಕೆಲಸ ಎಂದು ಹರಿಪ್ರಸಾದ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಸರ್ಕಾರ ಬಿದ್ದರೆ ಬೀಳಲಿ ಜಾತಿಗಣತಿ ಜಾರಿ ಮಾಡಲೇಬೇಕು: ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ