Karnataka Budget Session: ಸಭಾತ್ಯಾಗ ಮಾಡಿದ ವಿರೋಧ ಪಕ್ಷಗಳ ಶಾಸಕರು ರಾಜಭವನ ತೆರಳಿ ಸರ್ಕಾರ ವಜಾಮಾಡುವಂತೆ ಮನವಿ ಸಲ್ಲಿಸಿದರು

ಅರುಣ್​ ಕುಮಾರ್​ ಬೆಳ್ಳಿ

Updated on: Feb 29, 2024 | 1:05 PM

Karnataka Budget Session: ಕೈಯಲ್ಲಿ ಪ್ಲಕಾರ್ಡ್ ಗಳನ್ನು ರಾಜಭವನಕ್ಕೆ ಬಂದ ಶಾಸಕರು ರಾಜಭವನದ ಮುಖ್ಯದ್ವಾರದ ಬಳಿ ನಿಂತು ಘೋಷಣೆ ಕೂಗಿದರು. ದೇಶದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ದೇಶದ್ರೋಹಿಗಳನ್ನು ರಕ್ಷಿಸುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ವಜಾ ಮಾಡಿ ವಜಾ ಮಾಡಿ ಕಾಂಗ್ರೆಸ್ ಸರ್ಕಾರವನ್ನು ವಜಾಮಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರಾಜೀನಾಮೆ ನೀಡಿ ಎಂದು ಘೋಷಣೆಗಳನ್ನು ಕೂಗಿದರು.

ಬೆಂಗಳೂರು: ವಿಧಾನ ಮಂಡಲ ಅಧಿವೇಶನದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮಾತಾಡುವಾಗ ಧಿಕ್ಕಾರ ಧಿಕ್ಕಾರ ಎನ್ನುತ್ತಾ ಸದನದಿಂದ ಹೊರಬಂದ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ರಾಜಭವನದ (Raj Bhavan) ಕಡೆ ಹೋದರು. ಕೈಯಲ್ಲಿ ಪ್ಲಕಾರ್ಡ್ ಗಳನ್ನು (placard) ರಾಜಭವನಕ್ಕೆ ಬಂದ ಶಾಸಕರು ರಾಜಭವನದ ಮುಖ್ಯದ್ವಾರದ ಬಳಿ ನಿಂತು ಘೋಷಣೆ ಕೂಗಿದರು. ದೇಶದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ದೇಶದ್ರೋಹಿಗಳನ್ನು ರಕ್ಷಿಸುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ವಜಾ ಮಾಡಿ ವಜಾ ಮಾಡಿ ಕಾಂಗ್ರೆಸ್ ಸರ್ಕಾರವನ್ನು ವಜಾಮಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರಾಜೀನಾಮೆ ನೀಡಿ ಎಂದು ಘೋಷಣೆಗಳನ್ನು ಕೂಗಿದರು. ಆ ಸಮಯದಲ್ಲಿ ಒಂದು ಆಸಕ್ತಿಕರ ಸಂಗತಿ ಜರುಗುವುದನ್ನು ನೀವು ದೃಶ್ಯಗಳಲ್ಲಿ ಗಮನಿಸಬಹುದು. ಅಶೋಕ್ ನೇತೃತ್ವದಲ್ಲಿ ಶಾಸಕರು ಘೋಷಣೆ ಕೂಗುವಾಗ ಭೈರತಿ ಬಸವರಾಜ್ ಬಂದು ಅವರ ಪಕ್ಕದಲ್ಲಿ ನಿಂತುಕೊಳ್ಳುವ ಪ್ರಯತ್ನ ಮಾಡುತ್ತಾರೆ. ಕೂಡಲೇ ಆಶೋಕ ಬೇರೆ ಕಡೆ ಹೋಗಿ ನಿಲ್ಲುವಂತೆ ಹೇಳುತ್ತಾರೆ! ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಬಳಿಕ ಶಾಸಕರು ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ರಾಜಭವನದೊಳಗೆ ಹೋಗುತ್ತಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪಶುಸಂಗೋಪನೆ ಇಲಾಖೆಯ ಜಮೀನು ಅಲ್ಪಸಂಖ್ಯಾತರ ಇಲಾಖೆಗೆ; ಸರ್ಕಾರದ ವಿರುದ್ಧ ಕಿಡಿಕಾರಿದ ಆರ್ ಅಶೋಕ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.