ಫಾಫ್ ಸಿಡಿಲಬ್ಬರದ ಬ್ಯಾಟಿಂಗ್: ಶತಕದಂಚಿನಲ್ಲಿ ನಿವೃತ್ತರಾದ ಡುಪ್ಲೆಸಿಸ್
ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 184 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಯಾಟಲ್ ಓರ್ಕಾಸ್ ತಂಡವು 18.4 ಓವರ್ಗಳಲ್ಲಿ 137 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡ 51 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ 28ನೇ ಪಂದ್ಯದಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಫ್ಲೋರಿಡಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಯಾಟಲ್ ಓರ್ಕಾಸ್ ತಂಡವು ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡದ ಪರ ನಾಯಕ ಫಾಫ್ ಡುಪ್ಲೆಸಿಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.
52 ಎಸೆತಗಳನ್ನು ಎದುರಿಸಿದ ಫಾಫ್ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 91 ರನ್ ಬಾರಿಸಿದ್ದರು. ಆದರೆ ಕೊನೆಯ ಓವರ್ ಇರುವಾಗ ಡುಪ್ಲೆಸಿಸ್ ಸ್ವಯಂ ನಿವೃತ್ತಿ ಘೋಷಿಸಿ ಪೆವಿಲಿಯನ್ಗೆ ಮರಳಿದರು. ಅಂದರೆ ಶತಕಕ್ಕಿಂತ ತಂಡದ ಸ್ಕೋರ್ ಹಿತಾಸಕ್ತಿಗೆ ಒತ್ತು ನೀಡಿದ ಡುಪ್ಲೆಸಿಸ್ ನಿವೃತ್ತಿ ಪಡೆದು ಸ್ಫೋಟಕ ದಾಂಡಿಗ ಡೊನಾವನ್ ಫೆರೈರ ಅವರಿಗೆ ಕೊನೆಯ ಓವರ್ನಲ್ಲಿ ಅವಕಾಶ ನೀಡಿದರು.
ಅದರಂತೆ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 184 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಯಾಟಲ್ ಓರ್ಕಾಸ್ ತಂಡವು 18.4 ಓವರ್ಗಳಲ್ಲಿ 137 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡ 51 ರನ್ಗಳ ಭರ್ಜರಿ ಜಯ ಸಾಧಿಸಿದೆ.