AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ

4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ

ಝಾಹಿರ್ ಯೂಸುಫ್
|

Updated on: Jul 05, 2025 | 9:24 AM

Share

83 ರನ್​ಗಳ ಸುಲಭ ಗುರಿ ಪಡೆದ ವಾಷಿಂಗ್ಟನ್ ಫ್ರೀಡಂ ತಂಡದ ಪರ ರಚಿನ್ ರವೀಂದ್ರ (32) ಹಾಗೂ ಮುಖ್ತಾರ್ ಅಹ್ಮದ್ (36) ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 9.2 ಓವರ್​ಗಳಲ್ಲಿ 86 ರನ್​ ಬಾರಿಸಿ ವಾಷಿಂಗ್ಟನ್ ಫ್ರೀಡಂ ಪಡೆ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. 

ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ 26ನೇ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ತಂಡ ಭರ್ಜರಿ ಜಯ ಸಾಧಿಸಿದೆ. ಸಿಯಾಟಲ್ ಓರ್ಕಾಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಯಾಟಲ್ ಓರ್ಕಾಸ್ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 19 ರನ್​ಗಳಿಸುವಷ್ಟರಲ್ಲಿ 5 ಬ್ಯಾಟರ್​ಗಳು ಪೆವಿಲಿಯನ್​ಗೆ ಹಿಂತಿರುಗಿದ್ದರು.

ಈ ಹಂತದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಹೆನ್ರಿಕ್ ಕ್ಲಾಸೆನ್ 39 ಎಸೆತಗಳಲ್ಲಿ 4 ಸಿಕ್ಸ್​ನೊಂದಿಗೆ 48 ರನ್ ಬಾರಿಸಿದರು. ಆದರೆ ಮತ್ತೊಂದೆಡೆ ಸಿಯಾಟಲ್ ಓರ್ಕಾಸ್ ಪೆವಿಲಿಯನ್ ಪರೇಡ್ ಮುಂದುವರೆಸಿತ್ತು. ಪರಿಣಾಮ ಸಿಯಾಟಲ್ ಓರ್ಕಾಸ್ ತಂಡವು 17.4 ಓವರ್​ಗಳಲ್ಲಿ 82 ರನ್​ಗಳಿಸಿ ಆಲೌಟ್ ಆಯಿತು.

ವಾಷಿಂಗ್ಟನ್ ಫ್ರೀಡಂ ಪರ ಗ್ಲೆನ್ ಮ್ಯಾಕ್ಸ್​ವೆಲ್ 4 ಓವರ್​ಗಳಲ್ಲಿ ಕೇವಲ 12 ರನ್ ನೀಡಿ 3 ವಿಕೆಟ್ ಕಬಳಿಸಿದರು. ಇನ್ನು ಸೌರಭ್ ಹಾಗೂ ಜ್ಯಾಕ್ ಎಡ್ವರ್ಡ್ಸ್ ತಲಾ 3 ವಿಕೆಟ್ ಪಡೆದು ಮಿಂಚಿದರು.

ಇನ್ನು 83 ರನ್​ಗಳ ಸುಲಭ ಗುರಿ ಪಡೆದ ವಾಷಿಂಗ್ಟನ್ ಫ್ರೀಡಂ ತಂಡದ ಪರ ರಚಿನ್ ರವೀಂದ್ರ (32) ಹಾಗೂ ಮುಖ್ತಾರ್ ಅಹ್ಮದ್ (36) ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 9.2 ಓವರ್​ಗಳಲ್ಲಿ 86 ರನ್​ ಬಾರಿಸಿ ವಾಷಿಂಗ್ಟನ್ ಫ್ರೀಡಂ ಪಡೆ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.  ಇತ್ತ ಬೌಲಿಂಗ್ ಮೂಲಕ ಭರ್ಜರಿ ಪ್ರದರ್ಶನ ನೀಡಿದ  ವಾಷಿಂಗ್ಟನ್ ಫ್ರೀಡಂ ತಂಡದ ನಾಯಕ ಗ್ಲೆನ್ ಮ್ಯಾಕ್ಸ್​ವೆಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.