AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,6,6,6,6: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!

6,6,6,6,6: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!

ಝಾಹಿರ್ ಯೂಸುಫ್
| Updated By: ರಾಜೇಶ್ ದುಗ್ಗುಮನೆ|

Updated on:Jun 16, 2025 | 1:22 PM

Share

Major League Cricket 2025: ಮೇಜರ್ ಲೀಗ್ ಟಿ20 ಟೂರ್ನಿಯ 6ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಂಐ ನ್ಯೂಯಾರ್ಕ್ ತಂಡವು 20 ಓವರ್​ಗಳಲ್ಲಿ 182 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸ್ಯಾನ್ ​ಫ್ರಾನಿಸ್ಕೋ ಯುನಿಕಾರ್ನ್ಸ್ ತಂಡ 19.1 ಓವರ್​ಗಳಲ್ಲಿ 188 ರನ್​ ಬಾರಿಸಿ 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

ಯುಎಸ್​ಎ ನಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ 6ನೇ ಪಂದ್ಯದಲ್ಲಿ ಸ್ಯಾನ್ ​ಫ್ರಾನಿಸ್ಕೋ ಯುನಿಕಾರ್ನ್ಸ್ ತಂಡ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಕ್ಸೇವಿಯರ್ ಬಾರ್ಟ್ಲೆಟ್. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಂಐ ನ್ಯೂಯಾರ್ಕ್ ತಂಡವು 20 ಓವರ್​ಗಳಲ್ಲಿ 182 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಸ್ಯಾನ್ ​ಫ್ರಾನಿಸ್ಕೋ ಯುನಿಕಾರ್ನ್ಸ್ ತಂಡವು 12.2 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 108 ರನ್​ಗಳು ಮಾತ್ರ. ಈ ಹಂತದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕ್ಸೇವಿಯರ್ ಬಾರ್ಟ್ಲೆಟ್ ಇಡೀ ಪಂದ್ಯದ ಚಿತ್ರಣ ಬದಲಿಸಿದರು.

ಎಂಐ ನ್ಯೂಯಾರ್ಕ್​ ಬೌಲರ್​ಗಳ ಬೆಂಡೆತ್ತಿದ ಬಾರ್ಟ್ಲೆಟ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್​ಗಳ ಸುರಿಮಳೆಗೈದರು. ಪರಿಣಾಮ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು. ಅಲ್ಲದೆ 25 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 59 ರನ್ ಬಾರಿಸಿದರು.

ಕ್ಸೇವಿಯರ್ ಬಾರ್ಟ್ಲೆಟ್ ಅವರ ಈ ಸಿಡಿಲಬ್ಬರದ ಬ್ಯಾಟಿಂಗ್​ ನೆರವಿನಿಂದ ಸ್ಯಾನ್ ​ಫ್ರಾನಿಸ್ಕೋ ಯುನಿಕಾರ್ನ್ಸ್ ತಂಡ 19.1 ಓವರ್​ಗಳಲ್ಲಿ 188 ರನ್​ ಬಾರಿಸಿ 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಅಲ್ಲದೆ ವಿಸ್ಫೋಟಕ ಬ್ಯಾಟಿಂಗ್​ನೊಂದಿಗೆ ತಂಡಕ್ಕೆ ಗೆಲುವು ತಂದುಕೊಟ್ಟ ಬಾರ್ಟ್ಲೆಟ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ಪಡೆದಿದ್ದಾರೆ.

Published on: Jun 16, 2025 01:20 PM