ಯಡಿಯೂರಪ್ಪ ಮಗನನ್ನು ಗೆಲ್ಲಿಸಿ ಅಂದಿದ್ದ ಶಾಮನೂರು ವಿರುದ್ಧ ಯಾಕೆ ಕ್ರಮ ಆಗಿಲ್ಲ: ಸಿಡಿದೆದ್ದ ಮುಸ್ಲಿಂ ನಾಯಕ
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ, ಟಿಕೆಟ್ ವಿಚಾರಕ್ಕೆ ಆರಂಭವಾಗಿ ಇದೀಗ ನಾಯಕರ ತಲೆದಂಡ ತನಕ ಬಂದು ನಿಂತಿದೆ. ಹೌದು...ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ನಿಂದ ಅಮಾನತು ಮಾಡಲಾಗಿದ್ದು, ಇದೀಗ ಸಚಿವ ಜಮಿರ್ ಅಹ್ಮದ್ ಖಾನ್ಗೂ ಸಂಕಷ್ಟ ಎದುರಾಗಿದೆ. ಇನ್ನೊಂದೆಡೆ ಕೆಲ ಮುಸ್ಲಿಂ ನಾಯಕರು ಸಹ ಕಾಂಗ್ರೆಸ್ ಹೈಕಮಾಂಡ್ ನಡೆಗೆ ಆಕ್ರೋಶಗೊಂಡಿದ್ದು, ಈ ಹಿಂದೆ ಶಾಮನೂರು ಶಿವಶಂಕರಪ್ಪನವರು ಬಹಿರಂಗವಾಗಿಯೇ ಯಡಿಯೂರಪ್ಪನವರ ಪುತ್ರ ರಾಘವೇಂದ್ರ ಅವರನ್ನ ಗೆಲ್ಲಿಸಿ ಎಂದು ಹೇಳಿದಕ್ಕೆ ಯಾವ ಕ್ರಮಕೈಗೊಂಡಿದ್ದೀರಿ ಎಂದು ಪ್ರಶ್ನಿಸುತ್ತಿದ್ದಾರೆ.
ಬೆಂಗಳೂರು/ದಾವಣಗೆರೆ, (ಏಪ್ರಿಲ್ 15): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ, ಟಿಕೆಟ್ ವಿಚಾರಕ್ಕೆ ಆರಂಭವಾಗಿ ಇದೀಗ ನಾಯಕರ ತಲೆದಂಡ ತನಕ ಬಂದು ನಿಂತಿದೆ. ಹೌದು…ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ನಿಂದ ಅಮಾನತು ಮಾಡಲಾಗಿದ್ದು, ಇದೀಗ ಸಚಿವ ಜಮಿರ್ ಅಹ್ಮದ್ ಖಾನ್ಗೂ ಸಂಕಷ್ಟ ಎದುರಾಗಿದೆ. ಇನ್ನೊಂದೆಡೆ ಕೆಲ ಮುಸ್ಲಿಂ ನಾಯಕರು ಸಹ ಕಾಂಗ್ರೆಸ್ ಹೈಕಮಾಂಡ್ ನಡೆಗೆ ಆಕ್ರೋಶಗೊಂಡಿದ್ದು, ಈ ಹಿಂದೆ ಶಾಮನೂರು ಶಿವಶಂಕರಪ್ಪನವರು ಬಹಿರಂಗವಾಗಿಯೇ ಯಡಿಯೂರಪ್ಪನವರ ಪುತ್ರ ರಾಘವೇಂದ್ರ ಅವರನ್ನ ಗೆಲ್ಲಿಸಿ ಎಂದು ಹೇಳಿದಕ್ಕೆ ಯಾವ ಕ್ರಮಕೈಗೊಂಡಿದ್ದೀರಿ ಎಂದು ಪ್ರಶ್ನಿಸುತ್ತಿದ್ದಾರೆ.
ಇನ್ನು ಅಮಾನತುಗೊಂಡಿರುವ ಅಬ್ದುಲ್ ಜಬ್ಬಾರ್ ಸಹ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಶಾಮನೂರು ಶಿವಶಂಕರಪ್ಪನವರು ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ ಹೈಕಮಾಂಡ್ ವಿರುದ್ಧ ಅಸಮಧಾನ ಹೊರಹಾಕಿದ್ದಾರೆ. ಪಕ್ಷದಲ್ಲಿ ಒಬ್ಬರಿಗೊಂದು ರೀತಿ, ಇನ್ನೊಬ್ಬರಿಗೊಂದು ರೀತಿ ಆಗುತ್ತಿದೆ. ಶಾಮನೂರು ಓಪನ್ ಸ್ಟೇಜ್ನಲ್ಲಿ ಯಡಿಯೂರಪ್ಪನವರ ಮಗನನ್ನು ಗೆಲ್ಲಿಸಿ ಅಂದಿದ್ರು. ಆಗ ಶಾಮನೂರು ಶಿವಶಂಕರಪ್ಪ ವಿರುದ್ಧ ಯಾಕೆ ಕ್ರಮ ಆಗಲಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಟಿಕೆಟ್ ಪಡೆದವರು ನಮ್ಮೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಲ್ವಾ? ಯಾವ ಆಡಿಯೋ ವೈರಲ್ ಆಗಿದೆ ಎಂಬ ಮಾಹಿತಿ ನೀಡಬೇಕಲ್ವಾ? ತಪ್ಪೇ ಮಾಡಿಲ್ಲ ಅಂದಮೇಲೆ ನಾವು ಯಾರಿಗೆ ಹೆದರಬೇಕು? ದಾವಣೆಗೆರೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತೆ, ಸೋಲುತ್ತೆ ಅಂತಾ ಅನ್ನಿಸುತ್ತಿಲ್ಲ. ಅದಕ್ಕೂ ಮೊದಲೇ ಹೀಗೆ ಯಾಕೆ ಮಾಡ್ತಿದ್ದಾರೆ ಅನ್ನೋದು ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇದನ್ನೂ ಒದಿ: ಸಿದ್ದರಾಮಯ್ಯ ಬಣಕ್ಕೆ ಮತ್ತೊಂದು ಪೆಟ್ಟು ನೀಡಿದ ಡಿಕೆ ಶಿವಕುಮಾರ್: ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಜಬ್ಬಾರ್ ಅಮಾನತು
ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ
ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್ಲಾಲ್
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ

