ಈಡಿಗ ಮತ್ತು ಹಿಂದುಳಿದ ವರ್ಗ ಸಮುದಾಯಗಳ ಸಮಾವೇಶ ಆಯೋಜಿಸಿ ಬಿಕೆ ಹರಿಪ್ರಸಾದ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆಯೇ?
ತಮ್ಮನ್ನು ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳದ ಕಾರಣ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧನ್ಯವಾದ ಹೇಳುತ್ತಿದ್ದಾರೆ. ಅದೇ ಕಾರಣಕ್ಕೆ ತಾನು ಸಹ ಮುಖ್ಯಮಂತ್ರಿಯವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ ಅವರು ಒಂದು ಪಕ್ಷ ತಾನು ಸಚಿವನಾಗಿದ್ದರೆ, ಸಮುದಾಯದ ಜನಕ್ಕೆ ಸಮಯ ನೀಡುವುದು ಸಾಧ್ಯವಾಗುತ್ತಿರಲಿಲ್ಲ ಎಂದರು.
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ (BK HariPrasad) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮೇಲಿನ ಸಿಟ್ಟು, ಅಸಮಾಧಾn ಕಡಿಮೆಯಾದಂತಿಲ್ಲ. ಅವರು ನಿಸ್ಸಂದೇಹವಾಗಿ ಈಡಿಗ ಸಮುದಾಯದ (Ediga Community) ಬಹು ದೊಡ್ಡ ಲೀಡರ್. ಈಡಿಗ, ಬಿಲ್ಲವ, ದೀವರು ಮತ್ತು ಹಿಂದುಳಿದ ವರ್ಗಗಳನ್ನು ಒಂದೇ ವೇದಿಕೆಯಲ್ಲಿ ಜೊತೆಗೂಡಿಸುವ ಉದ್ದೇಶದಿಂದ ಒಂದು ದೊಡ್ಡ ಕಾರ್ಯಕ್ರಮ ಆಯೋಜಿಸುವ ಉದ್ದೇಶವನ್ನು ಅವರು ಇಟ್ಟುಕೊಂಡಿದ್ದಾರೆ. ಅದಕ್ಕೆ ಪೂರ್ವಭಾವಿಯಾಗಿ ನಗರದ ಅರಮನೆ ಮೈದಾನದಲ್ಲಿ ಇಂದು ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತಾಡಿದ ಹರಿಪ್ರಸಾದ್ ತಮ್ಮನ್ನು ಮಂತ್ರಿ ಮಾಡದ ಅಸಮಾಧಾನವನ್ನು ಬೇರೆ ರೀತಿಯಲ್ಲಿ ವ್ಯಕ್ತಪಡಿಸಿದರು. ತಮ್ಮನ್ನು ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳದ ಕಾರಣ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧನ್ಯವಾದ ಹೇಳುತ್ತಿದ್ದಾರೆ. ಅದೇ ಕಾರಣಕ್ಕೆ ತಾನು ಸಹ ಮುಖ್ಯಮಂತ್ರಿಯವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ ಅವರು ಒಂದು ಪಕ್ಷ ತಾನು ಸಚಿವನಾಗಿದ್ದರೆ, ಸಮುದಾಯದ ಜನಕ್ಕೆ ಸಮಯ ನೀಡುವುದು ಸಾಧ್ಯವಾಗುತ್ತಿರಲಿಲ್ಲ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ