AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್ ಚುನಾವಣೆಯಲ್ಲಿ ಜೆಡಿಎಸ್​ಗೆ ಸೋಲು: ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ

ಪರಿಷತ್ ಚುನಾವಣೆಯಲ್ಲಿ ಜೆಡಿಎಸ್​ಗೆ ಸೋಲು: ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ

ಗಣಪತಿ ಶರ್ಮಾ
|

Updated on:Jun 19, 2026 | 9:37 AM

Share

ಮೇಲ್ಮನೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯ ಸೋಲಿನ ನಂತರ ಹೆಚ್​ಡಿ ಕುಮಾರಸ್ವಾಮಿ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಅಡ್ಡ ಮತದಾನ ನಡೆಯುತ್ತದೆ ಎಂದು ಮೊದಲೇ ತಿಳಿದಿತ್ತು, ಅತಿಯಾದ ನಂಬಿಕೆ ಆಘಾತ ತಂದಿದೆ ಎಂದರು. ಯುವಕರಿಗೆ ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡುವ ನಿರ್ಧಾರವನ್ನು ಘೋಷಿಸಿದ್ದು, ಪಕ್ಷದ ಅಂತಿಮ ನಿರ್ಧಾರಗಳು ತಮ್ಮದೇ ಆಗಿರುತ್ತವೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು, ಜೂನ್ 19: ಮೇಲ್ಮನೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯ ಸೋಲಿನ ನಂತರ ಕೇಂದ್ರ ಸಚಿವ ಹೆಚ್​ಡಿ ಮಾರಸ್ವಾಮಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಡ್ಡ ಮತದಾನ ನಡೆಯುತ್ತದೆ ಎಂಬುದು ತಮಗೆ ಮೊದಲೇ ತಿಳಿದಿತ್ತು ಎಂದು ಅವರು ತಿಳಿಸಿದ್ದಾರೆ. ಅತಿಯಾದ ನಂಬಿಕೆ ಆಘಾತವನ್ನು ತಂದಿದೆ ಎಂದೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ಭವಿಷ್ಯದ ಕುರಿತು ಮಾತನಾಡಿದ ಕುಮಾರಸ್ವಾಮಿ, ಇನ್ನು ಮುಂದೆ ಯುವಕರು ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ನಿರ್ಧಾರ ಮಾಡಿರುವುದಾಗಿ ಘೋಷಿಸಿದರು. ಯಾವುದೇ ನಿರ್ದಿಷ್ಟ ವ್ಯಕ್ತಿಯ ಹೆಸರನ್ನು ಪ್ರಸ್ತಾಪಿಸಲು ನಿರಾಕರಿಸಿದ ಅವರು, ಮಾಧ್ಯಮ ಪ್ರತಿನಿಧಿಗಳು ಜಿಟಿ ದೇವೇಗೌಡ ಹೆಸರು ಪ್ರಸ್ತಾಪಿಸುತ್ತಿದ್ದಂತೆಯೇ ‘ಅವರ ಹೆಸರು ಎತ್ತಬೇಡಿ’ ಎಂದು ಪುನರುಚ್ಚರಿಸಿದರು. ಕಳೆದ ಒಂದೂವರೆ ವರ್ಷದಿಂದಲೂ ಅವರ ಬಗ್ಗೆ ಮಾತನಾಡಿಲ್ಲ, ಇತ್ತೀಚೆಗೆ ನಡೆದ ಚಾಮುಂಡೇಶ್ವರಿ ಕ್ಷೇತ್ರದ ಸಭೆಯಲ್ಲೂ ಅವರ ಹೆಸರನ್ನು ಪ್ರಸ್ತಾಪಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಪಕ್ಷದಲ್ಲಿ ಅಂತಿಮ ನಿರ್ಧಾರವನ್ನು ತಾವೇ ಕೈಗೊಳ್ಳುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಕಾರ್ಯಕರ್ತರ ಅಭಿಪ್ರಾಯಗಳನ್ನು ಆಧರಿಸಿ ತಮ್ಮ ನಿರ್ಣಯಗಳನ್ನು ಮಾಡುವುದಾಗಿ ತಿಳಿಸಿದರು. ಇದು ಪಕ್ಷದ ಆಂತರಿಕ ವಿಚಾರಗಳಲ್ಲಿ ತಮ್ಮದೇ ಅಂತಿಮ ಮಾತು ಎಂಬ ಸಂದೇಶವನ್ನು ರವಾನಿಸಿದೆ.

ಗುರುವಾರ ನಡೆದ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐವರೂ ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ. ಬಿಜೆಪಿಯ ಇಬ್ಬರು ಅಬ್ಯರ್ಥಿಗಳು ಮೇಲ್ಮನೆ ಪ್ರವೇಶಿಸಿದ್ದರೆ, ಜೆಡಿಎಸ್‌ನ ಗೋವಿಂದ ರಾಜುಗೆ ಸೋಲಾಗಿದೆ. ಜೆಡಿಎಸ್ ಶಾಸಕರ ಅಡ್ಡಮತದಾನವೇ ಇದಕ್ಕೆ ಕಾರಣವಾಯಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 19, 2026 09:21 AM

Follow Us